Breaking News

ಬೆಳಗಾವಿ

ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷ…..

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್‌ ಸದ್ಯ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಗಾಳ ಹಾಕಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷರಾಗಿದ್ದಾರೆ. ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ …

Read More »

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ……

ಬೆಳಗಾವಿ:‌ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಅವರು ಅವರು ಭಾಗಿಯಾಗಿದ್ದು, ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇತರೇ ಪಕ್ಷದವರು ಊಟಕ್ಕೆ ಬಂದಿದ್ದರೇ ಎಂದು ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು …

Read More »

ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ….

ಬೆಳಗಾವಿ: ಸಿಲಿಕಾನ್‌ ಸಿಟಿ ಬೆಂಗಳೂರು ದಿನಿದಿಂದ ದಿನಕ್ಕೆ ಬೃಹದ್ಧಾಕಾರವಾಗಿ ಬೆಳೆಯುತ್ತಲಿದ್ದು, ಅಷ್ಟೇ ಪ್ರಮಾಣದಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದರಿಂದ ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ. ಇನ್ನು ಸರ್ಕಾರ ರಸ್ತೆಗಳಿಗೆ ವೈಟ್‌ ಟಾಪಿಂಗ್‌ ಹಾಕುವ ಮೂಲಕ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿದೆ. ಹಾಗಾದರೆ ಇದಕ್ಕೆ ಮೀಸಲಿಟ್ಟ ಅನುದಾನ ಎಷ್ಟು…? ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ …

Read More »

ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ…

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ವಿಪಕ್ಷಗಳು ಸದನದ ಹೊರಗೆ ಹಾಗೂ ಸದನದ ಒಳಗೆ ಸರ್ಕಾರದ ಕಿಡಿಕಾರಿವೆ. ಮಂಗಳವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದು, ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ …

Read More »

ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ ಗಳ ಬಹುಮಾನ….

ಬೆಳಗಾವಿ: ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ ಗಳ ಬಹುಮಾನ ನೀಡುವುದರ ಜೊತೆಗೆ ಮಾಹಿತಿ ನೀಡುವವರ ಗೋಪ್ಯತೆಯನ್ನು ಕಾಪಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಮಂಗಳವಾರ ವಿಧಾನಪರಿಷತ್‌ನಲ್ಲಿ ನಡೆದ ಗಮನ ಸೆಳೆಯುವ ಸೂಚನೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ದಿನೇಶ್‌ ಗುಂಡೂರಾವ್‌ ಅವರು, ರಾಜ್ಯದಲ್ಲಿ ಕಾನೂನು ಬಾಹಿರವಾಗಿ …

Read More »

ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ: ಬಸವನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಹಾಗಿರಲಿ, ಬಿಕೆ ಹರಿಪ್ರಸಾದ್ “ಯಾರೋ ಹೊರಗಿನ ಬಂದವರು” ಅಂತ ಬೈತಿದ್ದು ಟಿವಿಯಲ್ಲಿ ನೋಡಿದೆ. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ …

Read More »

ಜನರ ಸಂಕಷ್ಟಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೊಂದರೆಯಾಗದಂತೆ ಕ್ರಮವಹಿಸಲು ರಾಜ್ಯ ಸರ್ಕಾರ ಅನೇಕ ರೀತಿಯ ಪರಿಹಾರಗಳನ್ನು ಕೈಗೊಂಡಿದೆ…..

ಬೆಳಗಾವಿ: ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಯಂತೆ ಮಳೆಯಾಗಿಲ್ಲ. ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಈಗಾಗಲೇ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಖಾತೆಗಳಲ್ಲಿ ಬರ ನಿರ್ವಹಣೆಗೆ ಒಟ್ಟು ರೂ.895 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಚಳಿಗಾಲದ ವಿಧಾನಸಭೆ ಕಲಾಪದಲ್ಲಿ ಬರ ನಿರ್ವಹಣೆ ಕುರಿತ ಚರ್ಚೆಯ ಮೇಲೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ …

Read More »

ಸರ್ಕಾರ ಬರಗಾಲ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ಸಿದ್ದವಿದೆ….

ಬೆಳಗಾವಿ: ಭೀಕರ ಬರಗಾಲದ ಹಿನ್ನಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಇರುವ 100 ಮಾನವ ದಿನಗಳ ಸೃಜನೆಯ ಮಿತಿಯನ್ನು, 150ಕ್ಕೆ ಹೆಚ್ಚಿಸುವಂತೆ ಕೋರಿ 2 ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ‌ಸೋಮವಾರ ಬೆಳಗಾವಿ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಬರಗಾಲದ ಚರ್ಚೆಗೆ ವೇಳೆ ಅವರು ಮಾತನಾಡಿದ ಅವರು, ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಜನರು ಉದ್ಯೋಗ …

Read More »

ಬೆಳಗಾವಿ ಪ್ರಕರಣ 7 ಜನರ ಬಂಧನ…

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಸಿದ್ದರಾಮಪ್ಪ, ಪೊಲೀಸ್ ಆಯಕ್ತ ಆಗಿರುತ್ತಾರೆ. ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು …

Read More »

ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ: ಸಿದ್ದರಾಮಯ್ಯ.

ಬೆಳಗಾವಿ: ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು-ಮೂರು ಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು …

Read More »