Breaking News

ಬೆಳಗಾವಿ

ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷ….

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ……

ಬೆಳಗಾವಿ: ಜಿಲ್ಲೆಯ‌ ವಿವಿಧೆಡೆಯಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಸಮಸ್ಯೆ ನಿವಾರಣೆ ಜೊತೆಗೆ ಜ್ಞಾನ ಭಂಡಾರವನ್ನು ಉಣಬಡಿಸುವ ಕೆಲಸವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುಸ್ತಕಗಳನ್ನು ಓದುತ್ತಿರುವುದು ಒಂದೆಡೆ ಶಿಸ್ತಿನಿಂದ ಆಸನಗಳಲ್ಲಿ ಕುಳಿತುಕೊಂಡು ಪುಸ್ತಕ ಓದುತ್ತಿರುವ ಜನ, ಮತ್ತೊಂದೆಡೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ ಭಾವಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿರುವುದು. ಹೌದು ಜಿಲ್ಲಾಧಿಕಾರಿ ಕಚೇರಿಗೆ ನಿತ್ಯ ವಿವಿಧ ಕೆಲಸದ …

Read More »

ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯ…

ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು …

Read More »

ಬೆಳಗಾವಿ ಜಿಲ್ಲೆಯಲ್ಲಿ‌‌ ನಿರಂತರವಾಗಿ ಮಳೆ ಜನಜೀವನ ಅಸ್ತವ್ಯಸ್ತ

ಬೆಳಗಾವಿ: ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ‌‌ ನಿರಂತರವಾಗಿ ಮಳೆ ಸುರಿಯುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಸತತ‌ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, ಪಣಸೂರಿ, ತಟ್ಟಿ, ಕುಂಭಾರ, ಬೈಲ್ …

Read More »

ಮುಸ್ಲಿಂ ಬಾಂದವರಿಂದ ಮಳೆಗಾಗಿ ನಮಾಜ್‌ .

ಬೆಳಗಾವಿ;ರಾಜ್ಯದಲ್ಲಿ ಮುಂಗಾರು ಮಳೆ ಕುಂಠಿತವಾದ ಕಾರಣ ಮುಸ್ಲಿಂ ಬಾಂದವರು ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದ ಕಾರಣದಿಂದ ಬರಗಾಲದ ಭೀತಿ ಎದುರಾಗಿದೆ. ಅಲ್ಲದೆ ರೈತರು ಕಂಗಾಲಾಗಿದ್ದು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವಂತಾಗಿದೆ. ಇದೀಗ ವಾಡಿಕೆಯಂತೆ ಮಳೆ ಬರಲು ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಮಳೆಗಾಗಿಬೆಳಗಾವಿಯ ಅಂಜುಮಾನ್ …

Read More »

ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಚಾಲನೆ

ಬೆಳಗಾಂವ:–ಜಿಲ್ಲೆಯ ಕಿತ್ತೂರಿನ ಡೊಂಬರಕೊಪ್ಪ ಪ್ರವಾಸಿ ಮಂದಿರದ ಆವರಣದಲ್ಲಿ ಧಾರವಾಡ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿಯವರು ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಆಚರಿಸಿದರು. ಈ ಸಂಧರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳವರಾದ ಗುರುದತ್ತ ಹೆಗಡೆ,ಉಪವಿಭಾಗಾಧಿಕಾರಿಗಳಾದ. ಅಶೋಕ ತೇಲಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರಾದ ಅರವಿಂದ ಏಗನಗೌಡರ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Read More »

ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸುಳೇಭಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಮಾವೇಶ

ಬೆಳಗಾವಿ :  ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಸುಳೇಭಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಮಾವೇಶ ನಡೆಸಿದ್ದು, ಸಮಾವೇಶದಲ್ಲಿ ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಕದಲ್ಲೇ ಮೊದಗಾ ಗ್ರಾಮದಲ್ಲಿ ಒಂದು ಪೆಂಡಾಲ್ ಹಾಕಿ ಕುಕ್ಕರ್ ಕೊಡುತ್ತಿದ್ದಾರೆ ಎಂದು ಹೇಳಿದರು. ಈ ವೇಳೆ ಕುಕ್ಕರ್ ಅಲ್ಲ ಮಿಕ್ಸರ್ ಅಂತಾ ಜನ ಹೇಳಿದರು. ಒಂದು ಡಬ್ಬಿ ಕೊಟ್ಟಿದ್ದು ಅದು 70 ರಿಂದ 80 ರೂ. ಇರಬಹುದು.  ಮಿಕ್ಸರ್ ಒಂದು ಆರು ಏಳೂ …

Read More »

ಸ್ಯಾಂಟ್ರೋ ರವಿ ಬಿಜೆಪಿ ಸರ್ಕಾರದ ಮುತ್ತು ರತ್ನಗಳು – ಡಿ.ಕೆ.ಶಿವಕುಮಾರ್​​

ಬೆಳಗಾವಿ:  ಸ್ಯಾಂಟ್ರೋ ರವಿ ಇಂಥವರೆಲ್ಲಾ ಬಿಜೆಪಿ ಸರ್ಕಾರದ ಮುತ್ತು ರತ್ನಗಳು,  ತನಿಖೆ ಮುಗಿಯದೇ ಬಹುತೇಕ್​ ಕೇಸ್​ಗಳನ್ನು ಕ್ಲೋಸ್ ಮಾಡ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿರೋದು ಬಿ ರಿಪೋರ್ಟ್​ ಸರ್ಕಾರ ಎಂದು ಡಿಕೆಶಿ ಗುಡುಗಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಕೆಶಿ, ಡಿಸಿಸಿ ಬ್ಯಾಂಕ್​ನಲ್ಲಿ 600 ಕೋಟಿ ಸಾಲ ಪಡೆದವರನ್ನು ಸುಮ್ಮನೆ ಬಿಟ್ಟಿದ್ದಾರೆ, ನೋಟಿಸ್​ ಕೊಟ್ಟು ನಾಟಕ ಆಡುತ್ತಿದ್ದಾರೆ ಅಷ್ಟೇ,  600 ಕೋಟಿ ಸಾಲ ಕಟ್ಟದವರ …

Read More »

ಜೈನ ಧರ್ಮ ಅತ್ಯಂತ ಪವಿತ್ರವಾದ ಧರ್ಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ : ಜೈನ ಧರ್ಮ ಅತ್ಯಂತ ಪವಿತ್ರ ಧರ್ಮವಾಗಿದ್ದು, ಭಗವಾನ್ ಮಹಾವೀರರು ನಮಗೆ ಸ್ಪೂರ್ತಿ ಮತ್ತು ಪ್ರೇರಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸೂರು ಜೈನ್ ಬಸದಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಿದರು ಹಾಗೂ ಶ್ರೀ ಪಟ್ಟಾಚಾರ್ಯ ಲಕ್ಷ್ಮಿ ಸೇನ ಮಹಾರಾಜರು ಕೊಲ್ಲಾಪುರ ಮತ್ತು ಶ್ರೀ ಸ್ವಸ್ತಿಕ ಜೀವಸೇನ ಭಟ್ಟಾರಕ ಸ್ವಾಮೀಜಿ, ನಾಂದಿನಿ , ಇವರ ಬೆಳಗಾವಿ ಮಂಗಲಪುರ ಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ …

Read More »

ಜ. 27 ರಂದು ಹಂಪಿ ಉತ್ಸವ : ಸಿಎಂ

ಬೆಳಗಾವಿ : ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು. ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಂಪಿ ಉತ್ಸವದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ನಂತರ ಮತ್ತು ವಿಜಯನಗರ ಜಿಲ್ಲೆ …

Read More »