Breaking News

ಬೆಳಗಾವಿ

ರಾಜ್ಯದ ಅನ್ನದಾತರಿಗೆ ಸಿಹಿ ಸುದ್ದಿ

ಬೆಳಗಾವಿ: ಸರ್ಕಾರಿ ಜಮೀನು, ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಿ ನಂಬರ್(ಪೈಕಿ ನಂಬರ್) ತೆಗೆದು ಹೊಸ ಸರ್ವೆ ನಂಬರ್ ನೀಡುವ ಪದ್ಧತಿಯನ್ನು ರಾಜ್ಯಾದ್ಯಂತ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಗೋಮಾಳ, ಜಮೀನುಗಳಲ್ಲಿ ರೈತರು ಕೃಷಿ ಮಾಡುತ್ತಿದ್ದು, ಈ ಭೂಮಿ ಆಧರಿಸಿ ಸಾಲ ಸೇರಿದಂತೆ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಕೋಲಾರ ಜಿಲ್ಲೆಯಲ್ಲಿ …

Read More »

ಹಳೇ ಪಿಂಚಣೆ ಯೋಜನೆಯೂ ಜಾರಿ‌ ಇಲ್ಲಾ : ಸಿಎಂ

ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್‌ಬಿಐ …

Read More »


ಬೀದಿ ಬದಿ ವ್ಯಾಪಾರಿಗೆ‌ ಸಿಹಿ ಸುದ್ದಿ

ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳಿಗೆ ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ವಿಧಾನ ಪರಿಷತ್ ನಲ್ಲಿ ಪಾಸ್ ಆಗಿದೆ. ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಸಾಲ ಪಡೆಯುವ ಬೀದಿ ಬದಿ ವ್ಯಾಪಾರಿಗಳು ಬರೆದುಕೊಡುವ ಸಾಲ ಕರಾರು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ನೀಡುವ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಕಂದಾಯ ಸಚಿವ ಆರ್. ಆಶೋಕ್ ಅವರು ವಿಧಾನ ಪರಿಷತ್ ನಲ್ಲಿ ಕರ್ನಾಟಕ ಸ್ಟಾಂಪ್ 4ನೇ ತಿದ್ದುಪಡಿ ವಿಧೇಯಕ 2022 …

Read More »

ಸಿಎಂ ಇಂದು ನವದೆಹಲಿ ಪ್ರವಾಸ

ಬೆಳಗಾವಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಇಂದು ನವದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆಗೆ ಕೇಂದ್ರದ ಅನುಮತಿ ಪಡೆಯಲು. ಅಲ್ಲದೆ, ನೆನಗುದಿಗೆ ಬಿದ್ದಿರುವ ವಿವಿಧ ಯೋಜನಗಳಿಗೆ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 2023-24ನೇ ಸಾಲಿನ ಬಜೆಟ್ ಬಗ್ಗೆ ಕೇಂದ್ರದಿಂದ ಹೆಚ್ಚಿನ ಅನುದಾನ, ಯೋಜನೆಗಳ ಜೊತೆಗೆ ಮಹತ್ವದ ಯೋಜನೆಗಳ ಘೋಷಣೆಗೆ ಅನುಮತಿ ಪಡೆಯಲು ಕಸರತ್ತು ನಡೆಸಲಿದ್ದಾರೆ. ಅಂತೆಯೇ ಪ್ರಧಾನಿ …

Read More »

ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ : ಸಿಎಂ

ಬೆಳಗಾವಿ : ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನಿನ್ನೆ ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳ ಚುನಾಯಿತ …

Read More »

ಕೋವಿಡ್ ಕುರಿತು ಕೆಲವು ನಿಯಮಗಳು ಜಾರಿಗೆ : ಡಾ.ಕೆ.ಸುಧಾಕರ್‌

ಬೆಳಗಾವಿ, ; ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್‌ …

Read More »

ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಪ್ರತಿಭಟನೆ : ಗಾಳಿ ರಭಸಕ್ಕೆ ಶಾಮಿಯಾನ ಬಿದ್ದು ಅವಘಡ

ಬೆಳಗಾವಿ:  ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭಗೊಂಡಿದೆ. ಈ ನಡುವೆಯೇ ಹೊರಗಡೆ ಹಲವು ಹೋರಾಟಗಳ ಸರಣಿಯೇ ಆರಂಭಗೊಂಡಿದೆ. ಈ ರೀತಿ ಪ್ರತಿಭಟನೆ ಮಾಡುವವರಿಗಾಗಿಯೇ ಒಂದು ಶಾಮಿಯಾನ ಹಾಕಲಾಗಿತ್ತು. ಆದರೆ ಅದು ಗಾಳಿ ರಭಸಕ್ಕೆ ಕುಸಿದು ಬಿದ್ದು ಅವಾಂತರವೇ ಸಂಭವಿಸಿದೆ. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ.ಕೊಂಡಸಕೊಪ್ಪ ಎಂಬಲ್ಲಿ ಪ್ರತಿಭಟನೆಗಾಗಿ ಶಾಮಿಯಾನ ಹಾಕಲಾಗಿದ್ದು, ಅಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತ್‌ ನೌಕರರ ಸಂಘದಿಂದ ಪ್ರತಿಭಟನೆ ನಡೆಯುತ್ತಿತ್ತು

Read More »

ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಕಾರ್ಯಕರ್ತರನ್ನು ತಡೆದ ಖಾಕಿಪಡೆ

ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು  ತಡೆದಿದ್ದಾರೆ. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು. ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ‌.ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Read More »

ಮನೆಯವರನ್ನು ಭೇಟಿಯಾಗಲು ಭರತ್ತಿದ್ದ ಯೋಧ ಸ್ಮಶಾನ ಸೇರಿದ

ಬೆಳಗಾವಿ : ಜಿಲ್ಲೆಯ ನಿಪ್ಪಾಣಿಯ ಯೋಧರು ಮೃತಪಟ್ಟಿರುವ ಘಟನೆ , ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ನಡೆದಿದೆ. 45 ವರ್ಷದ ರಾಜೇಂದ್ರ ಪಾಂಡುರಂಗ ಕುಂಬಾರ ಮೃತ ಯೋಧರಾಗಿದ್ದಾರೆ. ನಿಪ್ಪಾಣಿಯ ಭಾರತೀಯ ಸೇನೆಯ ಯೋಧ ರಾಜೇಂದ್ರ ಪಾಂಡುರಂಗ ಅಪಘಾತದಲ್ಲಿ ಉತ್ತರ ಪ್ರದೇಶದಲ್ಲಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಕಳೆದ 22 ವರ್ಷಗಳಿಂದ ಇವರು ಭಾರತೀಯ ಸೇನೆಯಲ್ಲಿ ಯೋಧನಾಗಿ ರಾಜೇಂದ್ರ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳಷ್ಟೆ ದೆಹಲಿಯಿಂದ ಉತ್ತರ ಪ್ರದೇಶದ ಪ್ರಯಾಗರಾಜ್‌ …

Read More »

ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ಟೀವ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದಾರೆ. ಆಖಾಡ ತಯಾರಾಗಿದೆ. ನಾವು ತಯಾರಿದ್ದೇವೆ, ನೀವು ಧುಮುಕಿ. ಚುನಾವಣೆ ಗೆದ್ದ ಮರುದಿನದಿಂದಲೇ ನಾನು ತಯಾರಿ ನಡೆಸಿದ್ದೇನೆ. ಚುನಾವಣೆಗೆ 90 ದಿನ ಇದೆ ಎಂದು ನಾನು ತಯಾರಿ ನಡೆಸಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪರಾಭವಗೊಳಿಸಲು ರಮೇಶ್ ಜಾರಕಿಹೊಳಿ …

Read More »