BigTv News
November 28, 2022
Breaking News, ಬೆಳಗಾವಿ
ಬೆಳಗಾವಿ: ತಾಲ್ಲೂಕಿನ ಹೊಸವಂಟಮುರಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ‘ಬೆಳಗಾವಿಯಿಂದ ಸಂಕೇಶ್ವರ ಕಡೆ ಹೋಗುತ್ತಿದ್ದ ಎರಡು ಲಾರಿ, ಎರಡು ಕಾರು ಮತ್ತು ಒಂದು ಟಂಟಂ ವಾಹನದ ಮಧ್ಯೆ ಅಪಘಾತವಾಗಿದೆ. ಗಾಯಗೊಂಡ 6 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಕಾಕತಿ ಠಾಣೆ ಪಿಎಸ್‌ಐ ಮಂಜುನಾಥ ಹುಲಕುಂದ ತಿಳಿಸಿದರು. ಈ ಅಪಘಾತದಿಂದಾಗಿ ಹೆದ್ದಾರಿ ಮೇಲೆ 2 ಕಿ.ಮೀ.ವರೆಗೆ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. …
Read More »
BigTv News
November 13, 2022
Breaking News, ಬೆಳಗಾವಿ
ಬೆಳಗಾವಿ : ಜಿಲ್ಲೆಯ ಗೋಕಾಕ್‌ನಲ್ಲಿ ಇಂದು ಬೃಹತ್ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಯಲಿದೆ. ಗೋಕಾಕ ನಗರದ ನ್ಯೂ ಇಂಗ್ಲೀಷ್ ಶಾಲಾ ಆವರಣದಲ್ಲಿ ಸಮಾವೇಶ ನಡೆಯಲಿದೆ. ಇದಕ್ಕೂ ಮುನ್ನ ಗೋಕಾಕ್‌ನಲ್ಲಿ ಬೃಹತ್ ರ‌್ಯಾಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ರ‌್ಯಾಲಿಯನ್ನು ಆಯೋಜಿಸಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಬಸವೇಶ್ವರ ವೃತ್ತ ಮಾರ್ಗವಾಗಿ ಸಮಾವೇಶ ನಡೆಯುವ ಸ್ಥಳಕ್ಕೆ ರ‌್ಯಾಲಿ ತಲಪಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು …
Read More »
BigTv News
November 12, 2022
Breaking News, ಬೆಳಗಾವಿ
ಬೆಳಗಾವಿ : ‘ಹಿಂದು’ ಎನ್ನುವುದು ಪರ್ಷಿಯನ್‌ನಿಂದ ಬಂದ ಪದವಾಗಿದ್ದು, ಈ ಪದದ ಅರ್ಥ ಅಶ್ಲೀಲವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಬಳಿಕ, ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ವಿವಾದ ತಣ್ಣಗಾಗಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ನ.6ರಂದು ಹಮ್ಮಿಕೊಂಡಿದ್ದ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರಿಗೆ …
Read More »
BigTv News
November 4, 2022
Breaking News, ಬೆಳಗಾವಿ
ಬೆಳಗಾವಿ: ಪಂಚಮಸಾಲಿಗೆ 2 ಎ ಮೀಸಲಾತಿ ಕುರಿತಂತೆ ಹಲವಾರು ದಿನಗಳಿಂದ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಲೇ ಇದೆ. ಆದರೆ ಸರ್ಕಾರ ಇನ್ನೂ ಈ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ. ಈ ಸಂಬಂಧ ಗೋಕಾಕ್ ಕ್ಷೇತ್ರದ 65 ಗ್ರಾಮಗಳಲ್ಲಿ ಪಂಚಮಸಾಲಿ ಸಮಾಜಕ್ಕೆ ಜಾಗೃತಿ ಮೂಡಿಸಲು ಶ್ರೀಗಳು ಹೊರಟಿದ್ದಾರೆ. ಈ ಕುರಿತು ಗೋಕಾಕ್ ತಾಲೂಕಿನ ಖನಗಾಂವ-ನಬಾಪುರ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ನೀವೆಲ್ಲರೂ ಹೋರಾಟಕ್ಕೆ …
Read More »
BigTv News
October 23, 2022
Breaking News, ಬೆಳಗಾವಿ
ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ ರಾಜಾ …
Read More »
BigTv News
October 23, 2022
Breaking News, ಬೆಳಗಾವಿ
ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, …
Read More »
BigTv News
October 18, 2022
Breaking News, ಬೆಳಗಾವಿ
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21ರಂದು ನಡೆಯುವ ಸಮಾವೇಶದಲ್ಲಿ ಕಿತ್ತೂರು ಕರ್ನಾಟಕದ ಪ್ರಥಮ ರಾಷ್ಟ್ರಮಾತೆ ಚನ್ನಮ್ಮರವರ 244ನೇ ಜಯಂತಿ, 199ನೇ ವಿಜಯೋತ್ಸವ ಮಾಡಲಾಗುವುದು. ಅಕ್ಟೋಬರ್ 21ರೊಳಗೆ ಮೀಸಲಾತಿ ಘೋಷಿಸದಿದ್ದರೆ ಅಂತಿಮ ಹಂತದ ಹೋರಾಟದ ದಿನಾಂಕ ನಿಗದಿ ಮಾಡುತ್ತೇವೆ. 25 ಲಕ್ಷ ಜನ ಸೇರಿಸಿ …
Read More »
BigTv News
October 16, 2022
Breaking News, ಬೆಳಗಾವಿ
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಇತರ ಹಿರಿಯ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ನೀಡಿದಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ಹೇಳಿದರು. ಕೊಲ್ಹಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ …
Read More »
BigTv News
October 4, 2022
Breaking News, ಬೆಳಗಾವಿ
ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13) ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ …
Read More »
BigTv News
September 8, 2022
Breaking News, ಬೆಳಗಾವಿ
ಬೆಳಗಾವಿ : ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು. ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು. ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ …
Read More »