admin
April 13, 2022
Breaking News, ಬೆಳಗಾವಿ
ಬೆರಾಜ್ಯದಲ್ಲಿ ಶೀಘ್ರವೇ ಖಾಲಿಯಿರುವ 950 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಕವಾಯತು ಮೈದಾನದಲ್ಲಿ ಮಂಗಳವಾರ ಕೆಎಸ್‌ಆರ್ ಪಿ ಪೊಲೀಸ್ ಕಾನ್ಸ್ ಟೇಬಲ್ ಪ್ರಶಿಕ್ಷಣಾರ್ಥಿಗಳ 4 ನೇ ತಂಡದ ನಿರ್ಗಮನದ ಪಥಸಂಚಲನದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 950 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Read More »
admin
February 23, 2022
Breaking News, ಬೆಳಗಾವಿ
ಬೆಳಗಾವಿ: ಇಲ್ಲಿನ ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ನಿಂದ ಕೊಡಮಾಡುವ 2021-22ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಮರ್ಶೆ-ಸಂಶೋಧನೆ, ಜಾನಪದ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಲಾಗಿದೆ.ಡಾ.ಸಿ.ಎನ್. ರಾಮಚಂದ್ರನ್ (ವಿಮರ್ಶೆ-ಸಂಶೋಧನೆ), ಡಾ.ಎನ್.ಆರ್. ನಾಯ್ಕ್ (ಜಾನಪದ) ಮತ್ತು ಪದ್ಮರಾಜ ದಂಡಾವತಿ (ಡಾ.ಬೆಟಗೇರಿ ಕೃಷ್ಣಶರ್ಮ ಪತ್ರಕರ್ತ ಪ್ರಶಸ್ತಿ) ಅವರಿಗೆ ನೀಡಲು ಟ್ರಸ್ಟ್‌ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಪ್ರಶಸ್ತಿಯು ತಲಾ ₹ 50ಸಾವಿರ ನಗದು ಮತ್ತು ಫಲಕ …
Read More »
admin
January 19, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ನಗರದಲ್ಲಿ ಕೊರೋನಾ ತನ್ನ ಹಾವಳಿಯನ್ನು ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ. ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ. ‘ಅವರಿಗೆ ರೋಗದ ಲಕ್ಷಣಗಳಿಲ್ಲ. ಹೀಗಾಗಿ, ಹೋಂ ಕ್ವಾರಂಟೈನ್ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರಿಗೆ ನಿಗಾ ವಹಿಸುವಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.ಠಾಣೆ ಆವರಣದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ರಾಜ್ಯದ ವಿವಿಧೆಡೆ ಪೊಲೀಸರಲ್ಲಿ ಸೋಂಕು ದೃಢಪಡುತ್ತಿದ್ದ ಹಿನ್ನೆಲೆಯಲ್ಲಿ ನಗರದಲ್ಲೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
Read More »
admin
January 11, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ಕೆಎಂಎಫ್ ನಲ್ಲಿ ಉದ್ಯೋಗವಕಾಶ ಸೃಷ್ಟಿಸಲಿದ್ದು, ಮಾರ್ಚ್ ನೊಳಗೆ 460 ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಶೀಥಲೀಕರಣ ಘಟಕ ಉದ್ಘಾಟಿಸಿ ಮಾತನಾಡಿ, ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕರು, ಉದ್ಯೋಗದಿಂದ ವಂಚಿತರಾದವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಕೆಎಂಎಫ್ ನಿರ್ಧರಿಸಿದೆ.
Read More »
admin
January 9, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕೆಲವರಷ್ಟೆ ಕಂಡುಬಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೇವೆ ಎಂದಿನಂತೆ ಆರಂಭಗೊಂಡಿದೆ. ನಗರದ ಮುಖ್ಯ ರಸ್ತೆಗಳು, ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ. ಅನಗತ್ಯವಾಗಿ ರಸ್ತೆಗಳಿದವರನ್ನು …
Read More »
admin
January 6, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ : ಮಹಾರಾಷ್ಟ್ರದಲ್ಲಿ ಪೊಲೀಸರು ಪ್ರತಿ ವಾಹನವನ್ನೂ ತಪಾಸಣೆಗೆ ಒಳಪಡಿಸಿದ ನಂತರವೇ ರಾಜ್ಯ ಪ್ರವೇಶಿಸಲು ಅನುವು ಮಾಡಿಕೊಡುತ್ತಿದ್ದಾರೆ.ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿದ್ದು ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಪರಿಸ್ಥಿತಿ ಇದೆ. ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ತಾಲೂಕಿನ ಬಾಚಿ ಚೆಕ್‌ಪೋಸ್ಟ್, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ, ಕಾಗವಾಡ ಹಾಗೂ ಅಥಣಿ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ
ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಳಗಾವಿ: ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ, ಟ್ವೀಟ್‍ನಲ್ಲಿ ಏನಿದೆ?ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಳಗಾವಿ:– ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಿದ್ಧಾಂತಗಳಿಗೆ ಅಪಚಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12ನೆ ಶತಮಾನದಲ್ಲಿ ಎಲ್ಲ ಸಮುದಾಯಗಳಿಗೂ ಲಿಂಗಧಾರಣೆ ಮಾಡುವ ಮೂಲಕ ಬಸವಣ್ಣ ಸಮಾನತೆಯ ತತ್ವ ಸಾರಿದ್ದರು. ಅಂಬೇಡ್ಕರ್ ಅವರು ಬೌದ್ಧ ಧರ್ಮದ ಬಗ್ಗೆ ಪ್ರಚಾರ ಮಾಡಿದ್ದರು. ಆದರೆ, ಬಿಜೆಪಿಯವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು …
Read More »
admin
December 21, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸಿನಿಮಾ
ಬೆಂಗಳೂರು : ಮಹಾರಾಷ್ಟ್ರದ ಎಂಇಎಸ್ ಸಂಘಟನೆಯನ್ನು ರದ್ದು ಮಾಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಂಡಳಿ ಅಧ್ಯಕ್ಷ ಜಯರಾಜ್, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ, ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡನೀಯ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಹೇಳಿದರು. ಇನ್ನೂ ನನ್ನ ಚಿಕ್ಕವಯಸ್ಸಿನಿಂದಲೂ ಎಂಇಎಸ್ ಪುಂಡಾಟಿಕೆಯನ್ನು ನೋಡುತ್ತಿದ್ದೇನೆ. ಇವರ ರಾಜ್ಯವಿರೋಧಿ ಧೋರಣೆಗಳನ್ನು …
Read More »