Breaking News

ಚಾಮರಾಜನಗರ

ಕಾರು ಡಿಕ್ಕಿಯಾಗಿ ಓರ್ವ ಸಾವು

ಚಾಮರಾಜನಗರ: ಇಬ್ಬರು ಸ್ನೇಹಿತರು ಗುಂಡ್ಲುಪೇಟೆ ತಾಲೂಕಿನ‌ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆಯ ಹಂಗಳ ರಸ್ತೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿ‌ನ ಗಣೇಶ್ (23) ಎಂಬಾತ ಮೃತಪಟ್ಟ ಬೈಕ್ ಸವಾರನಾಗಿದ್ದು, ಈತನ ಸ್ನೇಹಿತ ಈ ವೇಳೆ ಅಪಘಾತದಲ್ಲಿ ಪಾರಾದ ಘಟನೆ ನಡೆದಿದೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಹಿಂಬದಿ ಸವಾರ ಮೂತ್ರ ವಿಸರ್ಜನೆ ಮಾಡಬೇಕೆಂದು ರಸ್ತೆ ಪಕ್ಕಕ್ಕೆ ತೆರಳಿದ್ದಾಗ ಕೇರಳ ಮೂಲದ ಕಾರು …

Read More »

ಮನೆ ಗೋಡೆ ಕುಸಿದು ವೃದ್ಧೆ ಸಾವು

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರಿನಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ರಂಗಮ್ಮ(85) ಮೃತ ರ್ದುದೈವಿ. ಪುತ್ರಿ ಲಕ್ಷ್ಮಮ್ಮ ಹಾಗೂ ಪುತ್ರ ಪುಟ್ಟರಂಗಯ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮ

Read More »

ಆಹಾರ ಜೊತೆಗೆ ಔಷಧವನ್ನು ಕೊಡುವ ಮೂಲಕ ಪ್ರಾಣಿ ಪ್ರೀತಿ ಮೆರೆದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ..

ಚಾಮರಾಜನಗರ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಈಗ ಕೃಷಿಯಲ್ಲಿ ಸೆಕೆಂಡ್ ಇನ್ನಿಂಗ್ ಆರಂಭಿಸಿದ್ದಾರೆ. ಇದರ ಜೊತೆಗೆ, ಬೀದಿನಾಯಿಗಳ ಮೇಲೆ ವಿಶೇಷ ಅಕ್ಕರೆ ಇಟ್ಟುಕೊಂಡಿದ್ದು, ಆಹಾರ ಜೊತೆಗೆ ಔಷಧವನ್ನು ಕೊಡುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ.ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೃಷಿ ನಡೆಸುವ ರೋಜರ್ ಬಿನ್ನಿ ತಾವು ಬಂದಾಗಲೆಲ್ಲ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಕೆಲ ದಿನಗಳ ಹಿಂದೆಯಷ್ಟೇ, ಬೀದಿನಾಯಿಗಳಿಗೆ ಚುಚ್ಚುಮದ್ದನ್ನು ಕೂಡ ಹಾಕಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾವು …

Read More »

ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ….

ಚಾಮರಾಜನಗರ: ಗಾಂಧಿ ಜಯಂತಿ ಹಿನ್ನೆಲೆ ಮಹಾತ್ಮ ಸಾರಿದ ಸಂದೇಶವನ್ನು ಸಾರಿ ಕಾವೇರಿಗಾಗಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ ನಡೆಸಿದರು. ಅಹಿಂಸೆ ಮೂಲಕ ಮಹಾತ್ಮ ಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅದರಂತೆ ಗಾಂಧಿ ಜಯಂತಿ ದಿನದಂದು ಜೀವನದಿ ಕಾವೇರಿಗಾಗಿ ಇಂದು …

Read More »

ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ…

ಚಾಮರಾಜನಗರ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ರಾಮದ ಚೆನ್ನಪ್ಪ (60) ಸಾವಿಗೀಡಾದವರು. 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಭಾನುವಾರ ಸಂಜೆ ಕುಟುಂಬಸ್ಥರು ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಿ ಚಿತೆಗೆ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು …

Read More »

ಕರ್ನಾಟದ ಚಾಮರಾಜನಗರದಲ್ಲಿ ಉದ್ಯಮವನ್ನು ಆರಂಭಿಸುತ್ತಿರುವ ಲಂಕಾ ಕ್ರಿಕೆಟಿಗ….

ಚಾಮರಾಜನಗರ: ಶ್ರೀಲಂಕಾದ ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗುತ್ತಿದ್ದಾರೆ. ತಮ್ಮ ಉದ್ಯಮವನ್ನು ಕರ್ನಾಟದ ಚಾಮರಾಜನಗರದಲ್ಲಿ ಆರಂಭಿಸುತ್ತಿದ್ದಾರೆ. ಇಲ್ಲಿ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದಾರೆ ಲಂಕಾ ಕ್ರಿಕೆಟಿಗ. ಹೌದು…, ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸುತ್ತಿದ್ದು, 46 ಎಕರೆ ಪ್ರದೇಶವನ್ನು ಖರೀದಿಸಿದ್ದಾರೆ. ಸರ್ಕಾರದಿಂದ ಪಡೆಯಬೇಕಾದ ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಖಾನೆಯ ನಿರ್ಮಾಣದ ಕಾರ್ಯ ಆರಂಭಿಸಿದ್ದಾರೆ. ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ …

Read More »

ಮಗಳ ಮೇಲೆ ಅತ್ಯಾಚಾರ ವೆಸಗಿದ ಹೀನ ತಂದೆ…

ಚಾಮರಾಜನಗರ :- ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಶೇಷನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.ತಿಂಗಳ ಹಿಂದೆಯಷ್ಟೇ ಈ ಪ್ರಕರಣ ದಾಖಲಾಗಿತ್ತು.48 ವರ್ಷದ ತಂದೆ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಮಗಳು ಗರ್ಭಿಣಿಯಾಗಿದ್ದಳು. ಪಿಎಸ್ಐ ಪಿ. ಏನ್. ಶೇಷಾದ್ರಿ ಅವರು ತನಿಖೆ ನಡೆಸಿ ಆರೋಪಿಯ ಪಟ್ಟಿ ಸಲ್ಲಿಸಿದ್ದರು. ಆರೋಪಗಳು ಸಾಬೀತಾಗಿದ್ದರಿಂದ ಮಕ್ಕಳ ಸ್ನೇಹಿ ಮತ್ತು …

Read More »

ಚಾಮರಾಜನಗರ ಜಿಲ್ಲೆಯಲ್ಲಿ ಚಿರತೆ ದಾಳಿ ಬಾಲಕಿಗೆ ಗಂಭೀರ ಗಾಯ.

ಹನೂರು:- ತಾಲೂಕಿನ ಚಿಕ್ಕಮಾಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಬಾಲಕಿಯೊಬ್ಬಳ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದೆ.ಕಗ್ಗಲಿಗುಂದಿ ಗ್ರಾಮವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಸೋಮವಾರ ರಾತ್ರಿ 7:30 ರ ಸಮಯದಲ್ಲಿ ಘಟನೆ ನಡೆದಿದೆ. ಗ್ರಾಮದ ರಾಮು ಹಾಗೂ ಅವರ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದರು. ಮನೆ ಬಳಿಗೆ ಬಂದ ಚಿರತೆಯು ರಾಮು ಮೇಲೆ ದಾಳಿ …

Read More »

ಸಾಲಭಾದೆಯಿಂದ ನದಿಗೆ ಹಾರಿ ಆತ್ಮಹತ್ಯೆ

ಚಾಮರಾಜನಗರ: ಯುವಕನೋರ್ವ ಸಾಲಭಾದೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂ ಬಳಿ ನಡೆದಿದೆ. 24 ವರ್ಷದ ಸಚಿನ್ (24) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದನು. ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು, ಈ ಮೃತ ಯುವಕ ಸಚೀನ್, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೂವರು ಸ್ನೇಹಿತರಿಗೆ ಮೆಸೇಜ್ ಮಾಡಿ, …

Read More »

ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ನಿಧನ

ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಬ್ರಿಟಿಷರ ಲಾಠಿಕ್ಕಿತು ಬಿಸಾಡುತ್ತಿದ್ದ ಜಿಲ್ಲೆಯ ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ನಿಧನರಾಗಿದ್ದಾರೆ. ವಯೋಜಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಇತ್ತೀಚಿಗಷ್ಟೇ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಅಂದಿನ ಸ್ವಾತಂತ್ರ ಹೋರಾಟದ ದಿನಗಳಲ್ಲಿ ಇವರು ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ. ಹಾಗೂ ಪೊಲೀಸ್ ಠಾಣೆಗಳ ಮುಂದೆ ತೆರಳಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿ ಆಗುತ್ತಿದ್ದರಂತೆ. ಮನೆಯ ಒಳಗೆ ಕೂಡಿಹಾಕಿದರು …

Read More »