BigTv News
September 2, 2022
Breaking News, ಚಾಮರಾಜನಗರ
ಚಾಮರಾಜನಗರ : ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಜಿಲ್ಲೆಯ ವಿವಿಧೆಡೆ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಪಿ ಶಿವಕುಮಾರ್ ಅವರನ್ನು ಸಚಿವ ವಿ.ಸೋಮಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಮೊದಲು ಕೊಳ್ಳೇಗಾಲಕ್ಕೆ ಆಗಮಿಸಿದ ಸಚಿವ ಸೋಮಣ್ಣ, ಎಸ್ಪಿ ಶಿವಕುಮಾರ್ ಸ್ಥಳಕ್ಕೆ ಬಾರದಿರುವ ಬಗ್ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಿಂದ ನಾನೇ ಬಂದಿದ್ದೀನಿ. ನೀವ್ಯಾಕೆ …
Read More »
admin
March 24, 2022
Breaking News, ಚಾಮರಾಜನಗರ
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದಲ್ಲಿ ಇದೇ 28ರಿಂದ ಏ.2ರವವರೆಗೆ ನಡೆಯಲಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಟ್ಟದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು, ‘ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಶಾಸಕರ ಸಮ್ಮುಖದಲ್ಲಿ ಈ ಹಿಂದೆಯೇ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರೆ ಸಂಬಂಧ ಪೂರ್ವಬಾವಿ ಸಭೆ …
Read More »
admin
March 16, 2022
Breaking News, ಚಾಮರಾಜನಗರ
ಚಾಮರಾಜನಗರ:ಕೌಟುಂಬಿಕ ಕಲಹಕ್ಕೆ ಬೇಸತ್ತ ಪಿಡಿಓ ಪತ್ನಿ ನೇಣಿಗೆ ಶರಣಾದ ಘಟನೆ ನಡೆದಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ಪಿಡಿಒ ಆನಂದ್ ಕಾಂಬ್ಳೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆನಂದ್ ಕಾಂಬ್ಳೆ ಜತೆ 3 ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ದಿವ್ಯಾಗೆ ಮದುವೆ ಆಗಿತ್ತು. ದಂಪತಿ ಕೊಳ್ಳೇಗಾಲದಲ್ಲಿ ವಾಸವಿದ್ದರು. ದಂಪತಿಗೆ 8 ತಿಂಗಳ ಹೆಣ್ಣು ಮಗು ಇದೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ …
Read More »
admin
February 16, 2022
Breaking News, ಚಾಮರಾಜನಗರ
ಚಾಮರಾಜನಗರ: ಪದವಿ ಕಾಲೇಜ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಪು ಧರಿಸಿ ಬರಬಹುದು .ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಸಮವಸ್ತ್ರ ಕಡ್ಡಾಯವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ. ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಪದವಿ ಕಾಲೇಜುಗಳಲ್ಲಿ ಅಂತಹ ನಿಯಮವಿಲ್ಲ. ವಿದ್ಯಾರ್ಥಿಗಳು ಇಷ್ಟದ ಉಡುಪು ಧರಿಸಿ ಬರಬಹುದು ಎಂದು ಹೇಳಿದ್ದಾರೆ.
Read More »
admin
February 16, 2022
Breaking News, ಚಾಮರಾಜನಗರ
ಚಾಮರಾಜನಗರ : ಯಾರು ಏನೇ ಹೇಳಿದರೂ ಧರ್ಮವನ್ನು ದೊಡ್ಡಮಟ್ಟದಲ್ಲಿ ಬೆಳೆಸಬೇಕು, ಧರ್ಮ ಉಳಿಸಲು ಎಲ್ಲರೂ ಒಂದಾಗಬೇಕು. ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆಯು ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ಚಾಮರಾಜನಗರದ ನಂದಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿ, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ-ಉತ್ತರವಿದೆ. ಆದ್ದರಿಂದ, ಧರ್ಮ ರಕ್ಷಣೆ …
Read More »
admin
February 13, 2022
Breaking News, ಚಾಮರಾಜನಗರ
ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮನು (22) ಎಂಬಾತ ನೌಕರಿ ಸಿಗದಿದ್ದಕ್ಕೆ ಜಿಗುಪ್ಸೆಗೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ. ಈತ ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದು, ಯಾವುದೇ ನೌಕರಿ ಸಿಗದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಕ್ರಿಮಿನಾಶಕ ಸೇವಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …
Read More »
admin
February 8, 2022
Breaking News, ಚಾಮರಾಜನಗರ
ಚಾಮರಾಜನಗರ: ರಾಜ್ಯದಾದ್ಯಂತ ಹರಡುತ್ತಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಕಾಂಗ್ರೆಸ್ ಮೂಲ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನವರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಉಡುಪಿ ಕಾಲೇಜಿನಲ್ಲಿ 96 ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. 90 ಮಂದಿ ಸಮವಸ್ತ್ರ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದಾರೆ. ಆರು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಹೇಳುತ್ತಿದ್ದರು. ಕಾಂಗ್ರೆಸ್ ನಾಯಕರು ಅವರಿಗೆ ಬುದ್ಧಿ …
Read More »
admin
February 7, 2022
Breaking News, ಚಾಮರಾಜನಗರ
ಚಾಮರಾಜನಗರ: ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸುವುದನ್ನು ಖಂಡಿಸಿ ಜಿಲ್ಲಾ ಮಹಿಳಾ ಒಕ್ಕೂಟದ ವತಿಯಿಂದ ಮುಸ್ಲಿಂ ವಿದ್ಯಾರ್ಥಿನಿಯರು, ಮಹಿಳೆಯರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ನಗರದ ಡೀವಿಯೇಷನ್ ರಸ್ತೆಯ ಲಾರಿ ನಿಲ್ದಾಣದಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿ, ಅಲ್ಲಿ ಪ್ರತಿಭಟನೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರ್ಕಾರವು …
Read More »
admin
January 3, 2022
Breaking News, News, SPECIAL NEWS, ಚಾಮರಾಜನಗರ
ಚಾಮರಾಜನಗರ: ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು’ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪಕ್ಷದ ನಿಲುವಿನ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದರು. ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಹಿಂದೆ ಕಾಂಗ್ರೆಸ್ ಸರ್ಕಾರ ಇತ್ತು, ನಂತರ ಮೈತ್ರಿ ಸರ್ಕಾರ ಬಂತು. ಆಗ ಏನೂ ಮಾಡಲಿಲ್ಲ. ಈಗ ಕಾಂಗ್ರೆಸ್‌ನವರು ಪಾದಯಾತ್ರೆ ಮಾಡುವುದಕ್ಕೆ ಹೊರಟಿದ್ದಾರೆ. ಇದು …
Read More »
admin
December 2, 2021
Breaking News, ಅಪರಾಧ, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ …
Read More »