Breaking News

ತುಮಕೂರು

ರಾಜ್ಯದ 1,426 ಕಿ.ಮೀ ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಅಳವಡಿಕೆ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ 1,426 ಕಿ‌. ಮೀ. ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್‌ ಅಳವಡಿಸಲಾಗುವುದು ಈಗಾಗಲೇ 127 ಕಿ.ಮೀ ಪೂರ್ಣಗೊಂಡಿದೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ರೈಲ್ವೆ ಪ್ರಯಾಣಿಕರ ವೇದಿಕೆಯಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ 12 ಲಕ್ಷ ರೈಲ್ವೆ ನೌಕರರು ಕೆಲಸ ಮಾಡುತ್ತಿದ್ದಾರೆ. ಪ್ರಪಂಚದ ಸಾರಿಗೆ ವ್ಯವಸ್ಥೆಯಲ್ಲಿ ಭಾರತದ ರೈಲ್ವೆ 4ನೇ …

Read More »

ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಿ: ಕೇಂದ್ರ ಸಚಿವ ಸೋಮಣ್ಣ ಆಗ್ರಹ

ತುಮಕೂರು: ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು. ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಜನಗಣತಿಗೆ ಕಾಂಗ್ರೆಸ್‌ನಲ್ಲೇ ವಿರೋಧ ವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು ಎಂದು ಆಗ್ರಹಿಸಿದರು. ಜಾತಿ ಜನಗಣತಿ …

Read More »

ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ತುಮಕೂರು ಜಿಲ್ಲೆಯ 29 ಗ್ರಾಮಗಳು ಆಯ್ಕೆ

ತುಮಕೂರು: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯ 29 ಗ್ರಾಮ ಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌರ್ಯಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 79156 ಕೋಟಿ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ …

Read More »

ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ಸೂಚನೆ: ವಿ.ಸೋಮಣ್ಣ

ತುಮಕೂರು: ಸಮಾಜದಲ್ಲಿ ಧ್ವನಿ ಇಲ್ಲದ ವಿಶ್ವಕರ್ಮ ಸಮುದಾಯವನ್ನು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಆದ್ಯತೆ ಮೇರೆಗೆ ಪರಿಗಣಿಸುವಂತೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು. ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಶ್ವಕರ್ಮ ಸಮುದಾಯವು ಹಿಂದೂ ಧರ್ಮಕ್ಕೆ ನೀಡಿರುವ ಕೊಡುಗೆ ಸ್ಮರಣೀಯ. ವಿಶ್ವದ ಯಾವುದೇ ಕೆತ್ತನೆ, ಕುಸುರಿ, ಆಭರಣಗಳಲ್ಲಿ ವಿಶ್ವಕರ್ಮ ಸಮುದಾಯದವರ ಸ್ಪರ್ಶ ಕಾಣಬಹುದಾಗಿದೆ. ವಿಶ್ವಕರ್ಮರ ಸ್ಪರ್ಶವಿಲ್ಲದ ಗುಡಿ …

Read More »

ಹಾಲಿನ ದರ 5 ರೂ. ಹೆಚ್ಚಳಕ್ಕೆ ಶೀಘ್ರ ನಿರ್ಧಾರ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ ₹5 ಹೆಚ್ಚಳ ಮಾಡುವ ಪ್ರಸ್ತಾಪವಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಶನಿವಾರ ತಿಳಿಸಿದರು. ಹಾಲಿನ ದರ ಹೆಚ್ಚಳ ಮಾಡಿದ ಸಂಪೂರ್ಣ ಹಣವನ್ನು ರೈತರಿಗೆ ವರ್ಗಾಯಿಸಲಾಗುವುದು, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಚರ್ಚಿಸಿದ್ದು, ಬೆಲೆ ಹೆಚ್ಚಳ ಮಾಡಲು ಸಮ್ಮತಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದೇಶದ ಯಾವುದೇ ರಾಜ್ಯದಲ್ಲೂ ಇಷ್ಟೊಂದು ಕಡಿಮೆ ಬೆಲೆ …

Read More »

ಜೀತದಾಳುಗಳಂತೆ ಬಲವಂತದ ದುಡಿಮೆ: 36 ಕಾರ್ಮಿಕರನ್ನು ರಕ್ಷಿಸಿದ ಪೋಲಿಸರು

ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ, ಮಂಜುನಾಥಪುರ ಸುತ್ತಮುತ್ತಲಿನ ಪ್ರದೇಶದಲ್ಲಿನ ಶುಂಠಿ ಜಮೀನಿನಲ್ಲಿ ಜೀತದಾಳುಗಳಂತೆ, ಬಲವಂತವಾಗಿ ದುಡಿಯುತ್ತಿದ್ದ 36 ಕಾರ್ಮಿಕರನ್ನು ಪೊಲೀಸರು ಬುಧವಾರ ರಾತ್ರಿ ರಕ್ಷಿಸಿದ್ದಾರೆ. ಈ ಭಾಗದ ಕೆಲ ಪ್ರಭಾವಿಗಳು ರೈತರಿಂದ ನೂರಾರು ಎಕರೆ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಮೈಸೂರು, ಚಾಮರಾಜನಗರ, ಕೊಳ್ಳೇಗಾಲ, ಬಳ್ಳಾರಿ, ವಿಜಯಪುರ ಸೇರಿ ವಿವಿಧ ಜಿಲ್ಲೆಗಳ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಜಮೀನಿನಲ್ಲಿ ಕೆಲಸ ಮಾಡಲು ಕರೆ ತಂದಿದ್ದರು. ಅಗತ್ಯ ಸೌಲಭ್ಯ, ಕೂಲಿ …

Read More »

ಗಣೇಶ ಹಬ್ಬದೊಳಗೆ ಅಂಗನವಾಡಿ ಸಿಬ್ಬಂದಿಗೆ ಬಾಕಿ ವೇತನ: ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು: ಗಣೇಶ ಹಬ್ಬದ ಒಳಗೆ ಕೋಲಾರ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಾಕಿ ವೇತನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರಕ್ಕೆ ನಗರದ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಹಾಗೂ …

Read More »

ತುಮಕೂರಿನಲ್ಲಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

ತುಮಕೂರು : ನಗರದಲ್ಲಿ ಇಂದು ಸರ್ಕಾರದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಅವರು ಭಾಗವಹಿಸಿ ಮಡಿಲು ತುಂಬಿದ್ದಾರೆ. ಈ ಸಂದರ್ಭದಲ್ಲಿ ಮಗುವಿನ ಆಗಮನದಲ್ಲಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಶುಭ ಕೋರಿದ್ದಾರೆ. ತುಮಕೂರಿನ ಬಾಲಭವನದ ಆವರಣದಲ್ಲಿ ಇಂದು ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.ಪಟಾಕಿ ಸಿಡಿಸಿ ಪೂರ್ಣ …

Read More »

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಸಾಮಗ್ರಿ ಬೆಂಕಿಗೆ ಆಹುತಿ

ತುಮಕೂರು : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ತುಮಕೂರು ನಗರದ ಮಂಡಿಪೇಟೆಯಲ್ಲಿ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಈ ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿಯ ಜ್ವಾಲೆ ಪಕ್ಕದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ವ್ಯಾಪಿಸಿತು. ಅಕ್ರಮವಾಗಿ ಪಟಾಕಿ ಶೇಖರಿಸಿಟ್ಟಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ನಿರಂತರವಾಗಿ ಪಟಾಕಿಗಳು ಸ್ಫೋಟಗೊಂಡಿದ್ದು …

Read More »

ಪತ್ನಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ ಶಿಕ್ಷಕ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದ ಶಾಂತಿನಗರದಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕನಾಗಿರುವ ನಟರಾಜು, ಪತ್ನಿ ಅನಿತಾ ಎಂಬುವವರ ಮೇಲೆ ‌ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುತ್ತಿಗೆಯಿಂದ ಪತ್ನಿ ಅನಿತಾ ತಲೆಗೆ ಹೊಡೆದು ನಟರಾಜು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡ ಅನಿತಾಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಇನ್ನು ಈ …

Read More »