Breaking News

ತುಮಕೂರು

ಬಸ್ ಪಲ್ಟಿ : 8 ಜನ ಸಾವು

ತುಮಕೂರು: ಪಳವಳ್ಳಿ ಕಟ್ಟಿ ಬಳಿ ತಿರುವಿನಲ್ಲಿ ತೆರಳುವಾಗ ಬಸ್ ಪಲ್ಟಿಯಾಗಿ ಬಿದ್ದಿದ್ದು, 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ 8 ಜನರ ಪೈಕಿ ನಾಲ್ವರು ವಿದ್ಯಾರ್ಥಿಗಳು ನಡೆದಿರುವ ಘಟನೆ ಜಿಲ್ಲೆಯ ಪಾವಗಡದ ಪಳವಳ್ಳಿ ಕಟ್ಟಿಯಲ್ಲಿ ಸಂಭವಿಸಿದೆ. ಎಸ್ ವಿ ಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಬಸ್ಸಿನ ಒಳಗೆ, ಮೆಟ್ಟಿಲುಗಳ ಮೇಲೆ ಮಾತ್ರವಲ್ಲ ಬಸ್ಸಿನ ಟಾಪ್ ಮೇಲೂ ಪ್ರಯಾಣಿಕರು ಹತ್ತಿ ಸಾಗಿದ್ದರು. ವೈ.ಎ.ಹೊಸಕೋಟೆ ಮೂಲದ ಕಲ್ಯಾಣ್ (18), …

Read More »

ಹಿಜಾಬ್ ವಿವಾದ : 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲು

ತುಮಕೂರು: ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಲಾಗಿದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೌನ್‌ಹಾಲ್ ಬಳಿಯ ಸರ್ಕಾರಿ ಎಂಪ್ರೆಸ್ ಜೂನಿಯರ್ ಪಿಯು ಕಾಲೇಜಿನಲ್ಲಿ ಬುಧವಾರ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದಕ್ಕಾಗಿ ತರಗತಿಯೊಳಗೆ ಪ್ರವೇಶ ನಿರಾಕರಿಸಿದಾಗ ಸುಮಾರು 40 ವಿದ್ಯಾರ್ಥಿನಿಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಸೆಕ್ಷನ್ 144 ಜಾರಿಯಲ್ಲಿದ್ದರೂ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿದರು. …

Read More »

ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ತುಮಕೂರು: ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ರಂಜಿತ್ (27)  ಎಂಬಾತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಬಳಿ ನಡೆದಿದೆ. ಮಾವತ್ತೂರು ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಮರಣಹೊಂದಿದ ವ್ಯಕ್ತಿಗೆ ಕೋವಿಡ್ ಲಸಿಕೆ ಸರ್ಟಿಫಿಕೇಟ್ : ಆರೋಗ್ಯ ಇಲಾಖೆ ಎಡವಟ್ಟು

ತುಮಕೂರು:  ತಾಲೂಕಿನ ಮೆಳೆಕೋಟೆ ನಿವಾಸಿ ಬಸಪ್ಪ (80) ಎಂಬುವವರು6 ತಿಂಗಳ ಹಿಂದೆಯೇ ಮರಣ ಹೊಂದಿದ್ದರು. ಈ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದ ಸರ್ಟಿಫಿಕೇಟ್ ನೀಡಿ ತುಮಕೂರು‌ ಆರೋಗ್ಯ ಇಲಾಖೆ ಮಹಾ ಎಡವಟ್ಟು ಮಾಡಿದೆ. 2021ರ ಏಪ್ರಿಲ್ 9ರಂದು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದರು.ಈ ನಡುವೆ ಜುಲೈ 16ರಂದು ಅವರು ಮೃತಪಟ್ಟಿದ್ದರು. ಆದರೆ, ನಿನ್ನೆ (ಜನವರಿ 29) ಬಸಪ್ಪ ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೇಜ್​ ಬಂದಿದೆ. ಇದನ್ನು …

Read More »

ಬಸ್ ಅಪಘಾತ : 2 ಸಾವು, 8 ಜನರಿಗೆ ಗಾಯ

ತುಮಕೂರು: ಕಾಶಾಪುರ ರಸ್ತೆಯ ತಿರುವಿನಲ್ಲಿ ಬೇವಿನ ಮರಕ್ಕೆ ಸರ್ಕಾರಿ ಬಸ್ ಡಿಕ್ಕಿ  ಹೊಡೆದಿದೆ. ಅಪಘಾತದಲ್ಲಿ ಬಿಕ್ಷುಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಶಪುರದ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಿಕ್ಷುಕನ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಂತರ ಅದೇ ಬಸ್ ರೈತ ಗೋಪಾಲಯ್ಯ ಎಂಬುವವರ ಮೇಲೆಯು ಹರಿದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಗೋಪಾಲಯ್ಯ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಸರಕಾರಿ ಬಸ್ಸಿನ ಚಾಲಕ ಅಪಘಾತದ ನಂತರ ಸ್ಥಳದಿಂದ ಪರಾರಿ …

Read More »

ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ : ಮಕ್ಕಳಿಗೆ ಊಟ ಬಡಿಸಿದ ಸಿಎಂ

ತುಮಕೂರು : ದಾಸೋಹ ಭಾರತೀಯ ಪರಂಪರೆ. ಅನ್ನ, ಅಕ್ಷರ, ವಿದ್ಯೆ ಸೇರಿ ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠದಿಂದ ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿದ್ಧಗಂಗಾ ಮಠದಲ್ಲಿ ದಾಸೋಹ ದಿನದ ಅಂಗವಾಗಿ ಮಕ್ಕಳಿಗೆ ಊಟ ಬಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇಂದಿನ ಆಧುನಿಕ ಕಾಲದಲ್ಲೂ ದಾಸೋಹಕ್ಕೆ ಮಹತ್ವ ನೀಡುವ ಉದ್ದೇಶದಿಂದ ಇಂದು ರಾಜ್ಯದಾದ್ಯಂತ ದಾಸೋಹ ದಿನಾಚರಣೆ ಮಾಡಲಾಗುತ್ತಿದೆ. ನಮ್ಮನ್ನು ನಾವು ದಾಸೋಹ …

Read More »

ಡಾ.ಶಿವಕುಮಾರ ಸ್ವಾಮೀಜಿ 3ನೇ ಪುಣ್ಯ ಸ್ಮರಣೆ : ಐಜಿಪಿಗೆ ಗುಡುಗಿದ ಸಿಎಂ

ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು.ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ. ಐಜಿಪಿ ಬಳಿ ಸೀನಿಯರ್ ಆಫೀಸರ್ ಆಗಿದ್ದೀಯಾ ಅಷ್ಟು ಗೊತ್ತಾಗೊಲ್ವಾ ನಿನಗೆ ಜನ ದೂರ ನಿಲ್ಲುವಂತೆ ಹೇಳು ಎಂದು ಏರುದ್ವನಿಯಲ್ಲಿ ಗುಡುಗಿದ್ದಾರೆ.ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಆಗಮಿಸಿದ್ದ ಹಿನ್ನೆಲೆಯಲ್ಲಿ  ಈ ಘಟನೆ ಸಂಭವಿಸಿದೆ.

Read More »

ತುಮಕೂರು ಜಿಲ್ಲೆಯ 600 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ತುಮಕೂರು: ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 600 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 246 ವಿದ್ಯಾರ್ಥಿಗಳಲ್ಲಿ ಹಾಗೂ ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Read More »

ರಾಜಕಾರಣದಲ್ಲಿ ಮತ್ತೊಂದು ಗುಸುಗುಸು ಸ್ಫೋಟ

ತುಮಕೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಗುಸುಗುಸು ಸ್ಫೋಟಗೊಂಡಿದ್ದು, ಭಾರೀ ಸಂಚಲನ ಮೂಡಿಸಿದೆ. ಈ ನನ್​ ಮಗ, ನಮ್​ ಮಂತ್ರಿ ಹೇಂಗೆ ಗೊತ್ತಾ? ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಅವನಂತೆ. ಕೆಟ್ಟ ನನ್ಮಗ. ಇವನಿಂದ ಜಿಲ್ಲೆಯಲ್ಲಿ ಒಂದು ಸೀಟ್ ಬರೋಲ್ಲ… ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ. ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ… ಎಂದು ಸುದ್ದಿಗೋಷ್ಠಿಯಲ್ಲೇ ಕುಳಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜುಗೆ ಸಂಸದ ಜಿ.ಎಸ್.ಬಸವರಾಜು ಚಾಡಿ ಹೇಳುತ್ತಿದ್ದ ವಿಡಿಯೋ …

Read More »
Featured Video Play Icon

ದೇವಾಲಯಗಳು ಸರ್ಕಾರದ ಹಿಡಿತದಿಂದ ಮುಕ್ತಗೊಳ್ಳುವುದು ಖುಷಿಯ ಸಂಗತಿ-ಸಿದ್ಧಗಂಗಾ ಶ್ರೀ

Read More »