Breaking News

ದಕ್ಷಿಣ ಕನ್ನಡ

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಮಳೆಯೋ ಮಳೆ!

ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದ್ರೆ ಬೆಂಗಳೂರಿಗೆ ಬಿಸಿಲ ಕಾವು ಹೆಚ್ಚಲಿದೆ. ಮಾರ್ಚ್ 18 ಮತ್ತು 19 ರಂದು ಪ್ರತ್ಯೇಕ ಪ್ರದೇಶಗಳಿಗೆ ಶಾಖದ ಅಲೆಯ ಎಚ್ಚರಿಕೆಯೂ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ದಿನ ಯಾವುದೇ ಪ್ರಮುಖ ಬದಲಾವಣೆಗಳು ಕಂಡುಬರುವುದಿಲ್ಲ.ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ …

Read More »

ಹುಣಸೂರು ಅರಣ್ಯ :ತೋಟದ ಬೇಲಿಗೆ ಸಿಲುಕಿ ಗಂಡು ಜಿಂಕೆ ಸಾವು.

ನಾಗರಹೊಳೆ ಅರಣ್ಯದಂಚಿನ ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ಹೊಲಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದದೆ.ವಿಷಯ ತಿಳಿದ ಸ್ಥಳೀಯರು ಅರಣ್ಯ ಇಲಾಖೆ ಗಮನಕ್ಕೆ ತಂದಾಗ ಸ್ಥಳಕ್ಕೆ ಸಿಬ್ಬಂದಿ ನವೀನ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದರು.

Read More »

ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ…

ಸುಳ್ಯ (ದಕ್ಷಿಣ ಕನ್ನಡ) : ಕೋಝಿಕ್ಕೋಡ್​​ನಲ್ಲಿ ಇಬ್ಬರು ಶಂಕಿತ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇರಳದ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ನಿಫಾ ವೈರಸ್‌ ಪತ್ತೆಯಾಗಿ ಇಬ್ಬರು ಮೃತಪಟ್ಟ ಕೇರಳದ ಕೊಝಿಕ್ಕೋಡ್ ಜಿಲ್ಲೆಯ ಮರುದ್ವಾಂಕರ, ಆಯಂಚೇರಿ, ಕಾವಿಲಂಪ್ಪಾರ, ವಿಲ್ಯಾಂಪಳ್ಳಿ, ಕುಟ್ಯಾಡಿ, ಮಂಗಲಾಡ್ ಸೇರಿದಂತೆ ಹಲವಾರು …

Read More »

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಅವರ 75ನೇ ಜನ್ಮದಿನ….

ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಅವರ 75ನೇ ಜನ್ಮದಿನ ಹಾಗೂ ವೃತ್ತಿಜೀವನದ 50ರ ಸಂಭ್ರಮದ ಆಚರಣೆಯ ಸಲುವಾಗಿ ‘ಅನಂತ ಅಭಿನಂದನೆ’ ಕಾರ್ಯಕ್ರಮವು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಭಾನುವಾರ ಸಂಭ್ರಮದಿಂದ ನಡೆಯಿತು. ಅನಂತ್​ ನಾಗ್ ಮತ್ತು ಗಾಯತ್ರಿ ದಂಪತಿಯನ್ನು ಅತಿಥಿಗಳು ಮಲ್ಲಿಗೆ, ಜಾಜಿ ಹೂವಿನ ಮಾಲೆ, ಬೆಳ್ಳಿಯ ವೀಳ್ಯದ ಎಲೆ, ತುಳುನಾಡಿನ ಪರಂಪರೆಯ ಕಂಬಳದ ಬೆತ್ತ, ಪುಷ್ಪವೃಷ್ಟಿ ಸಹಿತ ವಿಶೇಷವಾಗಿ ಸನ್ಮಾನಿಸಿ, ಗೌರವಿಸಿದರು. …

Read More »

ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ..

ಬೆಳ್ತಂಗಡಿ(ದಕ್ಷಿಣ ಕನ್ನಡ): ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ. ಬೆಂಗಳೂರಿನ ನಿವಾಸಿಯ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಳು. ಕಳೆದ ವಾರ ಕಾಲೇಜು ಕೊನೆಗೊಂಡಿದ್ದು, ಆ.02ರಂದು ರಾತ್ರಿ ತನ್ನ ಊರಾದ ಬೆಂಗಳೂರಿಗೆ ತೆರಳಲು ಉಜಿರೆಯಿಂದ ಪರಿಚಯಸ್ಥ ಆಟೋ ಚಾಲಕನಿಗೆ ಕರೆ ಮಾಡಿದ್ದಳು. ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ …

Read More »

ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರ ರಕ್ಷಣೆ..

ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವ್ರತ್ತರಾದ ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದರು.ಮತ್ತೆ ಮತ್ತೊಂದು …

Read More »

ಉಯ್ಯಾಲೆಯಲ್ಲಿ ಅಡುವಾಗ ಬಿದ್ದು ಮಗು ಸಾವು.

ಬೆಳ್ತಂಗಡಿ (ದಕ್ಷಿಣ ಕನ್ನಡ) : ಉಯ್ಯಾಲೆಯಲ್ಲಿ ಆಟವಾಡುವ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆ ಬಳಿ ಭಾನುವಾರ ಸಂಜೆ ನಡೆದಿದೆ. ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಶ್ರೀಷಾ ಬಿದ್ದಿದ್ದು, ಇದನ್ನು ಆತನ ತಂಗಿ ನೋಡಿ …

Read More »

ಆಡು ನುಂಗಲು ಬಂದ ಹೆಬ್ಬಾವು, ನುಂಗಲಾಗದೆ ಮರಳಿ ಕಾಡು ಸೇರಿದ ಹೆಬ್ಬಾವು

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಆಡು ನುಂಗಲು ಸಾಧ್ಯವಾಗದೇ ಆಡನ್ನು ಬಿಟ್ಟು ಹೆಬ್ಭಾವು ತೆರಳಿದ ಘಟನೆ ನಡೆದಿದೆ. ಆಹಾರ ಅರಸಿ ನಾಡಿಗೆ ಬಂದಿದ್ದ ಭಾರೀ ಗಾತ್ರದ ಹೆಬ್ಬಾವು ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಆಡೊಂದನ್ನು ಬೇಟೆಯಾಡಿದ್ದು ಹಿಡಿದ ಆಡನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಾಡಿ ವಿಫಲವಾಗಿ ನುಂಗಲು ಸಾಧ್ಯವಾಗದೆ ತೆರಳಿದೆ. ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ …

Read More »

ವಿದ್ಯಾರ್ಥಿನಿಗೆ ಯುವಕನೋರ್ವ ಚೂರಿ ಇರಿಯುವ ಭಯಾನಕ ದೃಶ್ಯ ವೈರಲ್

ಇಂದು ಸಂಜೆ ಮಂಗಳೂರಿನ ದೇರಳಕಟ್ಟೆ ಬಳಿಯ ಬಗಂಬಿಲ ಸಮೀಪ ನಡೆದ ಘೋರ ಘಟನೆ ಬೈಕಿನಲ್ಲಿ ಬಂದ ಯುವಕನಿಂದ ಕೃತ್ಯ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಚೂರಿ ಇರಿದಿರುವ ಶಂಕೆ ವಿದ್ಯಾರ್ಥಿನಿಗೆ ಚೂರಿ ಇರಿದು ತಾನೂ ಚೂರಿಯಿಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಯುವಕ ಕೃತ್ಯ ಮಾಡುವ ಮುನ್ನ ಮಿಸ್ ಯು ಲವ್ ಎಂದು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ

Read More »