Breaking News

ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಲಾವಣ್ಯ (30) ಆತ್ಮಹತ್ಯೆಗೆ ಶರಣಾದವರು. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ಲಾವಣ್ಯಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಲಾವಣ್ಯ ಮಂಜುನಾಥ್ ಎಂಬುವರ ಜತೆ ವಿವಾಹವಾಗಿದ್ದರು. 13 ವರ್ಷಗಳ ದಾಂಪತ್ಯಕ್ಕೆ ಇಬ್ಬರು ಮಕ್ಕಳನ್ನು ಹೊಂದಿದ್ದರು. ಆದರೆ ಇದೀಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಟ್ಟೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *