Breaking News

ಸಾಮೂಹಿಕ ಅತ್ಯಾಚಾರ : ಒಬ್ಬ ಆರೋಪಿ ಕೆರೆಗೆ ಹಾರಿ ಸಾವು

ದಿಸ್‌ಪುರ್: 14 ವರ್ಷದ ಬಾಲಕಿಯ ಮೇಲೆ ಅಸ್ಸಾಂನ ಧಿಂಗ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಆರೋಪಿಗಳ ಪೈಕಿ ಓರ್ವ ಇಂದು ಬೆಳಿಗ್ಗೆ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ.

ಪೊಲೀಸ್ ತಂಡವು ಆತನ ಕೈಗೆ ಕೋಳ ತೊಡಿಸಿ ಕೃತ್ಯ ಎಸಗಿದ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾಗ ಕೆರೆಗೆ ಹಾರಿ ಸತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ (ಆಗಸ್ಟ್ 23) ಬಂಧಿಸಲ್ಪಟ್ಟ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಕೊಳಕ್ಕೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್‌ನಲ್ಲಿ ಗುರುವಾರ (ಆಗಸ್ಟ್ 22) 14 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಕೊಳದ ಬಳಿಯ ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಈ ಘೋರ ಕೃತ್ಯ ಬೆಳಕಿಗೆ ಬಂದಿತ್ತು.

ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು ಎಂದು ಬಳಿಕ ಪೊಲೀಸರು ಮಾಹಿತಿ ನೀಡಿದ್ದರು. ಇಂದು ಮುಂಜಾನೆ 3.30ರ ಸುಮಾರಿಗೆ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಯನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಆತ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *