Breaking News

ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ ಗಜಗಾಂಭಿರ್ಯದಿಂದ ಹೆಜ್ಜೆ ಹಾಕಿದೆ.

ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ದಸರಾ ಆನೆಗಳು ವಾಕಿಂಗ್ ಮಾಡುತ್ತವೆ. ಮೊದಲ ಹಂತದಲ್ಲಿ ಕಾಡಿನಿಂದ ಅರಮನೆಗೆ 9 ಆನೆಗಳು ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ.

ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ ವೃತ್ತದ ಮೂಲಕ ಜಂಬೂ ಬಜಾರ್ ತಲುಪಿ ಹೈವೇ ಸರ್ಕಲ್ ಮೂಲಕ ದಸರಾ ಗಜಪಡೆಗಳು ಬನ್ನಿ ಮಂಟಪ ತಲುಪಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ. ಜಂಬೂ ಸವಾರಿಯ ದಿನ ಯಾವುದೇ ತೊಂದರೆಯಾಗದಿರಲಿ ಎಂದು ತಾಲೀಮು ನಡೆಸಲಾಗುತ್ತಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *