Breaking News

ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ದಾವಣಗೆರೆ: ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ.

ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆಗಸ್ಟ್ 25) ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನುಳಿದ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಕುಡಿಯುವ ನೀರಿನ ಪೈಪು ಒಡೆದು ಚರಂಡಿ ನೀರು ಮಿಶ್ರಣವಾದ ಹಿನ್ನಲೆ ನೀರು ಕಲುಷಿತಗೊಂಡಿತ್ತು. ಘಟನೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *