ಹುಬ್ಬಳ್ಳಿ: ಹಂಸರಾಜ್ ಭಾರದ್ವಾಜ್ ಒಬ್ಬ ರಾಜಕಾರಣಿಯ ಗವರ್ನರ್ ಆಗಿದ್ದ. ಅಂವ ರಾಜಕಾರಣಿ ಗವರ್ನರ್ ಆಗಿ ವರ್ತಿಸಿದ.
ಮಾಜಿ ರಾಜ್ಯಪಾಲರ ವಿರುದ್ಧ ಏಕ ವಚನದಲ್ಲಿಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಹಂಸರಾಜ್ ಭಾರದ್ವಾಜ್ ರಾಜಕಾರಣ ಬಿಟ್ಟರೆ ಬೇರೇನು ಮಾಡಲಿಲ್ಲ. ದಿನ ಬೆಳಗಾದರೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು…?
ಅವತ್ತು ರಾಜ್ಯಪಾಲರ ಭಾಷೆ, ರಾಜ್ಯಪಾಲರ ನಿರ್ಧಾರ ಇವರಿಗೆ ಬೇಕಾಗಿತ್ತು. ಈಗ ಅದೇ ಪರಿಸ್ಥಿತಿ ಅವರಿಗೆ ಬಂದಾಗ ರಾಜ್ಯಪಾಲರ ವಿರುದ್ಧ ಮಾತನಾಡುತ್ತಿದ್ದಾರೆ. ಇದು ಸಂವಿಧಾನ ಮತ್ತು ರಾಜ್ಯಂಗದ ಪ್ರಶ್ನೆ ಇದೆ.
ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಗಳು ಆ ಸ್ಥಾನ ಬಹಳ ಮುಖ್ಯವಾದದ್ದು. ಅವರ ಕಾರ್ಯ ವೈಖರಿ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಹೇಳುವುದಕ್ಕೆ ರೀತಿ ನೀತಿ ಇದೆ. ಆ ರೀತಿ ನಡೆದುಕೊಂಡರೆ ರಾಜ್ಯ ಸರ್ಕಾರದ ಗೌರವ ಸಿಗುತ್ತದೆ. ರಾಜ್ಯಪಾಲರನ್ನು ಬೈಯೋದ್ರಿಂದ ಕಾಂಗ್ರೆಸ್ ಏನು ಲಾಭ ಆಗಲ್ಲ. ಅಹಿಂದ ಸಂಘಟನೆಯಿಂದ ರಾಜಭವನ ಚಲೋ ವಿಚಾರ, ಇದೆಲ್ಲವೂ ಕಾಂಗ್ರೆಸ್ ಪ್ರೇರಿತ ಹೋರಾಟ ಎಂದರು.
ಬೈಟ್- ಬಸವರಾಜ ಬೊಮ್ಮಾಯಿ, ಸಂಸದ.
bigtvnews | Hubli Dharwad News | Kannada News | Karnataka News Hubli News | News In Hubli | Local news

