ಹುಬ್ಬಳ್ಳಿ: ಉಡುಪಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಆಯ್ತು, ಈ ಕುರಿತು ಗೃಹ ಮಂತ್ರಿಗಳು ಇದು ಸಾಮೂಹಿಕ ಅತ್ಯಾಚಾರ ಅಲ್ಲ ಎಂದು ಪ್ರತಿಕ್ರಿಯಿಸಿದರು. ನಂಜನಗೂಡಿನಲ್ಲಿ ಒಬ್ಬ ದಲಿತ ಹೆಣ್ಣುಮಗಳ ಶವ ನೇತಾಡಿದ್ರೂ ದಲಿತರಿಗೆ ರಕ್ಷಣೆ ಸಿಗುತ್ತಿಲ್ಲ. ದಲಿತರ ರಕ್ಷಣೆ ಮಾಡುವಲ್ಲಿ ಗೃಹ ಸಚಿವರು ಸಂಪೂರ್ಣ ದಕ್ಷತೆ ಮರೆತಿದ್ದಾರೆ. ರಾಜ್ಯದಲ್ಲಿ ದಲಿತರ ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪಿ. ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ. ರಾಜ್ಯದಲ್ಲಿ ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ಕಳೆದ ಬಾರಿ 3 ಲಕ್ಷ 21 ಸಾವಿರ ಬಜೆಟ್ ಮಂಡನೆ ಮಾಡಿದ್ರು ಈ ಹಣ ಎಲ್ಲಿ ಹೋಯ್ತು..? ಈವರೆಗೂ ಯಾವ ಶಾಸಕನಿಗೂ ಅನುದಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರ ಹಣದ ಮೂಟೆ ಲೂಟಿ ಮಾಡಿ ಹೈಕಮಾಂಡ್‌ಗೆ ಕಳುಹಿಸುವಲ್ಲಿ ನಿರತವಾಗಿದೆ. ರಾಜ್ಯದ ಅಭಿವೃದ್ಧಿ ಮಾಡಲು ಸಾಧ್ಯವಾಗದೇ ಈ ರೀತಿ ವಿಷಯಾಂತರ ಮಾಡುತ್ತಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

