Breaking News

ಅಮೇರಿಕಾದಲ್ಲಿ ಭಾರತೀಯ ಮೂಲದ ಖ್ಯಾತ ವೈದ್ಯ ಗುಂಡಿಕ್ಕಿ ಹತ್ಯೆ

ವಾಷಿಂಗ್ಟನ್‌: ಅಮೇರಿಕಾದಲ್ಲಿ ಭಾರತೀಯ ಮೂಲದ ಖ್ಯಾತ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಅಲಬಾಮಾ ನಗರದ ಟುಸ್ಕಲುಸಾ ಎಂಬಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ ಡಾ.ರಮೇಶ್ ಬಾಬು ಪೆರಮಸೆಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇವರು ಅಮೆರಿಕದಲ್ಲಿ ಹಲವು ಆಸ್ಪತ್ರೆಗಳನ್ನು ನಡೆಸುತ್ತಿರುವ ಖ್ಯಾತ ವೈದ್ಯರು.

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯವರಾಗಿದ್ದ ಡಾ.ರಮೇಶ್, ಕ್ರಿಲ್ಸನ್ ನೆಟ್ವರ್ಕ್ ಹೆಸರಿನ ಸ್ಥಳೀಯ ವೈದ್ಯರ ಸಂಘಟನೆಯ ಸಂಸ್ಥಾಪಕ ಹಾಗೂ ವೈದ್ಯಕೀಯ ನಿರ್ದೇಶಕರಲ್ಲೊಬ್ಬರು. ಟುಸ್ಕಲೂಸಾದಲ್ಲಿ ವೈದ್ಯರಾಗಿಯೂ ಪ್ರಾಕ್ಟಿಸ್ ಮಾಡುತ್ತಿದ್ದ ಅವರು, ಆರೋಗ್ಯಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಯಿಂದ ಖ್ಯಾತರಾಗಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *