Breaking News

ಬೆರಟಿ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ತಮ್ಮಯ್ಯ,ಸಿ .ಟಿ. ರವಿ

ಕಡೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹುಲಿಕೆರೆ ವ್ಯಾಪ್ತಿಯ ಪ್ರಮುಖ ಜಲಾ ಮೂಲ ಬೆರಟಿ ಕೆರೆ ತುಂಬಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಶಾಸಕ ಹೆಚ್. ಡಿ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತಮ್ಮಯ್ಯ ಅಯ್ಯನ ಕೆರೆ ಯಿಂದ ಬೆರಟಿ ಕೆರೆಗೆ ನೀರು ತರುವ ಯೋಜನೆಗೆ ಹಿಂದಿನ ಶಾಸಕರ ಅವಧಿಯಲ್ಲಿ 9ಕೋಟಿ ಅನುದಾನ ಬಿಡುಗಡೆಯಾಗಿತ್ತು ಆದರೆ ತಾಂತ್ರಿಕ ಕಾರಣದಿಂದ ಕೆಲಸ ಆರಂಭಗೊಂಡಿರಲಿಲ್ಲ, ಈಗ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಕೆಲಸ ಆರಂಭಿಸಿದ್ದೇವೆ ಎಂದರು.

ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿ ವರ್ಷ ಕೆರೆ ತುಂಬಿ ಈ ಗ್ರಾಮ ಪಂಚಾಯಿತಿಗೆ ಬಾಗಿನ ಬಿಡುವ ಸುಯೋಗ ಲಭಿಸಲಿ ಅಭಿವೃದ್ಧಿ ವಿಚಾರ ಬಂದಾಗ ನಾನು ಹಾಗೂ ಶಾಸಕ ತಮ್ಮಯ್ಯ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *