Breaking News

ಮಗಳ ವಯಸ್ಸಿನ ಪುಟ್ಟ ಬಾಲಕಿಯ ಮೇಲೆ ಕಾಮುಕನ ಅತ್ಯಾಚಾರ

ಹುಬ್ಬಳ್ಳಿ: ಡ್ರೈವರ್ ಕೆಲಸ ಮಾಡುತ್ತಿದ್ದ 54 ವರ್ಷದ ಕಾಮುಕ 7 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಅಶೋಕ ನಗರ ಠಾಣೆಯ ಪೊಲೀಸರು ಬಂಧಿಸಿ ಆರೋಪಿ ವಿರುದ್ಧ ಪೋಕ್ಸ ಪ್ರಕರಣವನ್ನು ದಾಖಲು ಮಾಡಿದ್ದಾರೆ.

ಬಂಧಿತ ಆರೋಪಿ ಹೆಸರು ನೂರ್ ಅಹ್ಮದ್ . ಈತನ ಮನೆಯಲ್ಲಿಯೇ ಬಾಡಿಗೆಗೆ ಇದ್ದ ಕುಟುಂಬವೊಂದರ 7 ವರ್ಷದ ಮಗುವನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಯತ್ನಿಸಿದ್ದ. ಕೂಡಲೇ ಮಗುವಿನ ಮನೆಯವರು ಮಗು ಎಲ್ಲಿಗೆ ಹೋಗಿದೆ ಅಂತ ಹುಡುಕಾಟ ಮಾಡುತ್ತಿದ್ದಾಗ ಆರೋಪಿ ನೂ‌ರ್ ಅಹ್ಮದ್ ಮನೆಯಲ್ಲಿ ಮಗು ಪತ್ತೆಯಾಗಿತ್ತು. ಆಗ ಮಗುವಿನ ಮೇಲೆ ಕಾಮಿ ನೂರ್ ಅಹ್ಮದ್ ಅತ್ಯಾಚಾರ ಮಾಡಲು ಯತ್ನಿಸಿದ ಮಾಹಿತಿ ಲಭ್ಯವಾಗಿ ಪೊಲೀಸರಿಗೆ ಮಾಹಿತಿಯನ್ನು ರವಾನೆ ಮಾಡಿದ್ದರು. ಘಟನಾ ಸ್ಥಳಕ್ಕೆ ಎಸಿಪಿ ಶಿವಪ್ರಕಾಶ್‌ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದು ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪೋಕೋ ಪ್ರಕರಣವನ್ನು ದಾಖಲು ಮಾಡಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *