ಹುಬ್ಬಳ್ಳಿ: ಇಂದು ಗಬ್ಬೂರ ಕ್ರಾಸ್‌ನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನಧಿಕೃತ ಮರಳು ಸಾಗಾಣಿಕೆ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದವು.
ಕಾರ್ಯಾಚರಣೆ ವೇಳೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ತಪಾಸಣೆ ಮಾಡಿ, ಪರವಾನಗಿ ಇಲ್ಲದ 4 ವಾಹನಗಳನ್ನು ಜಪ್ತಿ ಮಾಡಲಾಯಿತು.
ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರು, ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು…
bigtvnews | Hubli Dharwad News | Kannada News | Karnataka News Hubli News | News In Hubli | Local news

