Breaking News

ಹಣದ ವಿಚಾರಕ್ಕೆ ವ್ಯಕ್ತಿಯ ಮೇಲೆ ಹಲ್ಲೆ

ಹುಬ್ಬಳ್ಳಿ: ವ್ಯಕ್ತಿಯೊಬ್ಬನಿಗೆ ಯುವಕನೊಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೊಟಗುಂಡಹುಣಸಿ ಮತ್ತು ಕುಂದಗೋಳ ಕ್ರಾಸ್ ಬಳಿ ನಡೆದಿದೆ.

ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದೆ. ಕೊಟಗುಂಡಹುಣಸಿ ಗ್ರಾಮದ ನಿವಾಸಿ ಯಲ್ಲಪ್ಪ ಸಿದ್ದಪ್ಪ ಹಂಚಿಕಟ್ಟಿ ಹಲ್ಲೆಗೊಳಗಾದ ವ್ಯಕ್ತಿ. ಇತ ಮತ್ತು ಪಕ್ಕಿರೇಶ ರಂಗಣ್ಣನವರ ನಡುವೆ ಹಣದ ವಿಚಾರಕ್ಕೆ ಜಗಳ ಆಗಿದೆ. ಇನ್ನು ಮಾತಿಗೆ ಮಾತು ಬೆಳೆದು ಯಲ್ಲಪ್ಪನ ಮೇಲೆ ಫಕ್ಕಿರೇಶ ಎಂಬಾತ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನಂತೆ.ಈ ಘಟನೆಯಲ್ಲಿ ಯಲ್ಲಪ್ಪ ಹಂಚಿಕಟ್ಟಿ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *