ಹುಬ್ಬಳ್ಳಿ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಪರಿಣಾಮ ಎರಡೂ ವಾಹನದ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಕುಸುಗಲ್ ಗ್ರಾಮದ ಹೊರ ವಲಯದಲ್ಲೇ ನಡೆದಿದೆ.
ಹುಬ್ಬಳ್ಳಿಯಿಂದ ಗುಲ್ಬರ್ಗಾಗೆ ತೆರಳುತ್ತಿದ್ದ ಎಸ್ ಆರ್ ಎಸ್ ಖಾಸಗಿ ಬಸ್ ಹಾಗೂ ನರಗುಂದ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಎರಡೂ ವಾಹನಗಳ ಚಾಲಕರ ಕಾಲುಗಳು ಕಟ್ ಆಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಕೂಡಲೇ ಸ್ಥಳೀಯರ ಮತ್ತು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರ ಸಹಾಯದಿಂದ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಆಗಿಲ್ಲ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

