Breaking News

ದೇವಸ್ಥಾನ ಆವರಣದಲ್ಲಿ ಗೋವಿನ ಬಾಲ ಪತ್ತೆ : ರಾಜಸ್ಥಾನದಲ್ಲಿ ಪ್ರತಿಭಟನೆ

ರಾಜಸ್ಥಾನ: ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ.

ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಭಾನುವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದವು.

ಧಾರ್ಮಿಕ ಸ್ಥಳದ ಮುಂದೆ ಗೋವಿನ ಬಾಲ ಪತ್ತೆಯಾದ ಘಟನೆ ಮತ್ತು ಅದರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮಾತನಾಡಿ ಪ್ರತಿಭಟನೆ ಅಂತ್ಯಗೊಳಿಸಿದ್ದರು. ಘಟನೆಯ ಹಿಂದಿರುವವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.

ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ವಾತಾವರಣ ಶಾಂತಿಯುತವಾಗಿದೆ. ನಾವು ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಮತ್ತು ಮಾರುಕಟ್ಟೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಖೋರ್ವಾಲ್ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *