ಬೆಂಗಳೂರು: ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಇಂದು ನಡೆಯುತ್ತಿದೆ. ಪರೀಕ್ಷೆಯಲ್ಲಿ ಸುಮಾರು 2.5 ಲಕ್ಷ ಆಕಾಂಕ್ಷಿಗಳು ಭಾಗಿಯಾಗಲಿದ್ದಾರೆ. KAS ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕೆಲವು ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.
ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ಸ್ ಅಸೋಸಿಯೇಷನ್‌ನಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕೆಎಎಸ್ ಆಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದರು. ಈ ಹೋರಾಟಕ್ಕೆ ಕೆಲವು ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಕೊನೆ ಕ್ಷಣದವರೆಗೂ ಪರೀಕ್ಷೆ ಪೋಸ್ಟ್ ಪೋನ್ ಮಾಡಿಸುವ ಯತ್ನ ಮಾಡಲಾಗಿತ್ತು.
ರಾಜ್ಯ ಸರ್ಕಾರ ಹಾಗೂ ಕೆಪಿಎಸ್‌ಸಿ ತನ್ನ ನಿರ್ಧಾರ ಬದಲಿಸಿಲ್ಲ. ಆಗಸ್ಟ್ 27ಕ್ಕೆ KAS ಪರೀಕ್ಷೆ ನಡೆದೆ ನಡೆಯುತ್ತೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇಂದು ರಾಜ್ಯಾದ್ಯಂತ ಪರೀಕ್ಷೆ ಆಯೋಜನೆ ಆಗಿದೆ. ಒಟ್ಟು 384 ಹುದ್ದೆಗಳಿಗಾಗಿ ಪರೀಕ್ಷೆ ನಡೆಯುತ್ತಿವೆ. 2017-18 ಸಾಲಿನ ವಿದ್ಯಾರ್ಥಿಗಳಿಗೆ ಸರ್ಕಾರ ಪರೀಕ್ಷೆ ಬರೆಯಲು ಕೊನೆ ಅವಕಾಶ ಕಲ್ಪಿಸಿದೆ. ಹೀಗಾಗಿ 2017-18 ಬ್ಯಾಚ್‌ನ 1500ಕ್ಕೂ ಹೆಚ್ಚು ಮಂದಿ ಈ ಪರೀಕ್ಷೆ ಬರೆಯಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

