Breaking News

ಚೆಕ್ ಬೌನ್ಸ್ ಪ್ರಕರಣ : ಕನ್ನಡದ ನಟಿ ಜೈಲು ಪಾಲು

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಾಲ್ಕು ವರ್ಷಗಳ ಹಿಂದೆ ನಟಿ ಪದ್ಮಜಾ ರಾವ್ ಅವರ ಚೆಕ್ ಬೌನ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರ ಬಳಿಯಿಂದ ಪದ್ಮಜಾ ರಾವ್, 41ಲಕ್ಷ ರೂಪಾಯಿ ಹಣ ಪಡೆದು, ಆ ಬಳಿಕ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು 2021ರಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಈ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಸಿನಿಮಾ ಜೊತೆಗೆ ಸದ್ಯ ಕಿರುತೆರೆಯಲ್ಲೂ ಬಹುಬೇಡಿಕೆಯ ನಟಿಯಾಗಿರುವ ಪದ್ಮಜಾ ರಾವ್‌ ಅವರನ್ನು ದೋಷಿ ಎಂದು ತೀರ್ಪು ನೀಡಿರುವ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *