Breaking News

ಮೈಸೂರಿನ ಕೊರಗಜ್ಜ ದೇವಾಲಯ ನೆಲಸಮ

ಮೈಸೂರು: ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ.

ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ಆರ್.ರಕ್ಷಿತ್ ಅವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ತೆರವುಗೊಳಿಸಿದ್ದಾರೆ. ಕೇರ್ಗಳ್ಳಿ ಗ್ರಾಮದ ಸ.ನಂ.60ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಮಾತ್ರವಲ್ಲ, ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು.

ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡು ಒತ್ತುವರಿ ತೆರುವುಗೊಳಿಸುವಂತೆ ಆದೇಶಿಸಿದ್ದಾರೆ. ಅದರನ್ವಯ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಜಯಪುರ ಹೋಬಳಿ ಉಪ ತಹಸೀಲ್ದಾ‌ರ್ ನಿಂಗಪ್ಪ, ರಾಜಸ್ವ ನಿರೀಕ್ಷಕ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು, ಬೋಗಾದಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು, సిబంది ವರ್ಗದವರು, ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಜಯಪುರ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *