ಉಡುಪಿ:ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸೋಮವಾರ(ಆ 26) ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ.
ಅಭಯ್ ಪ್ರಕರಣದ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

