Breaking News

ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಸಾವು

ಚಿಕ್ಕಬಳ್ಳಾಪುರ: ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಂಕರ್ ರೆಡ್ಡಿ (40) ಮೃತ ದುರ್ದೈವಿ. ಶಂಕರ್ ರೆಡ್ಡಿ ಟ್ರ್ಯಾಕ್ಟ‌ರ್ ಚಾಲನೆ ಮಾಡುತ್ತಾ ಕೆಸರು ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ ಮೇಲೆತ್ತಲು ಪ್ರಯತ್ನ ಪಟ್ಟಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಅಡಿ ಸಿಲುಕಿ ಮೃತಪಟ್ಟರು. ಅಲ್ಲಿದ್ದವರು ಸ್ಥಳೀಯರು ಜೆಸಿಬಿ ಮೂಲಕ ಟ್ರ್ಯಾಕ್ಟರ್‌ನಡಿಯಲ್ಲಿದ್ದ ಮೃತ ದೇಹವನನ್ನು ಹೊರತೆಗೆದಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕು ದಿಗವ ಪ್ಯಯಲವಾರಪಲ್ಲಿ ದುರ್ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *