Breaking News

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿಯಾಗಿ ನಾಗರಾಜ ಗೌರಿ ಆಯ್ಕೆ

ಧಾರವಾಡ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ಧಾರವಾಡದ ನಾಗರಾಜ ಗೌರಿ ಚುನಾಯಿತರಾಗಿದ್ದಾರೆ.

ಈ ಚುನಾವಣೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ನಡೆದಿತ್ತು. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ಚುನಾಯಿತರಾಗಿದ್ದು, ಧಾರವಾಡದಿಂದ ನಾಗರಾಜ ಗೌರಿ ಚುನಾಯಿತರಾಗಿದ್ದಾರೆ. ಮೊನ್ನೆಯಷ್ಟೇ ಈ ಚುನಾವಣೆ ಲಿಂಗಾಯತ ಮಹಾಸಭಾದ ಸಭಾಭವನದಲ್ಲಿ ನಡೆದಿತ್ತು.

ಜಿಲ್ಲೆಯಲ್ಲಿ ಒಟ್ಟು 31145 ಮತದಾರರಿದ್ದು, ಅದರಲ್ಲಿ 18016 ಮತದಾರರು ಮತದಾನ ಮಾಡಿದ್ದರು. ಇದರಲ್ಲಿ ನಾಗರಾಜ ಗೌರಿ ಅವರು 11165 ಮತಗಳನ್ನು ಪಡೆಯುವ ಮೂಲಕ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಇದೀಗ ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಕಾರಣೀಕರ್ತರಾದ ಸಮಾಜದ ಎಲ್ಲ ಮುಖಂಡರಿಗೆ ನಾಗರಾಜ ಗೌರಿ ಅವರು ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *