ಕಲಘಟಗಿ: ಪಟ್ಟಣದ ಹೊರವಲಯದ ತಡಸ ಕ್ರಾಸ್ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಲಾರಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿದ್ದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮಹಿಳಾ ಕೂಲಿ ಕಾರ್ಮಿಕರನ್ನು ಹೊತ್ತ ಟಾಟಾ ಏಸ್ ಮಡಕಿಹೊನ್ನಳ್ಳಿಯಿಂದ ಹುಬ್ಬಳ್ಳಿ ರಸ್ತೆಯ ಕಡೆ ಹೊರಟಿತ್ತು. ಆದರೆ ತಡಸ ಕ್ರಾಸ್ ಬಳಿ ಲಾರಿ ಹಾಗೂ ಟಾಟಾ ಎಸ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಹಿಳೆ ಮೃತಪಟ್ಟಿದ್ದು, ಇನ್ನು ಐವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

