ಧಾರವಾಡ: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದ ಪಾಲಾಗಿದ್ದ ನಟ ದರ್ಶನ್ ಆ್ಯಂಡ್ ಟೀಮ್‌ಅನ್ನು ಬೇರೆ ಬೇರೆ ಕಾರಾಗೃಹಗಳಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ಕೊಟ್ಟಿದೆ.
A9 ಆರೋಪಿಯಾಗಿರುವ ಧನರಾಜ್ ಎಂಬಾತನನ್ನು ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ.ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದ್ದ ಫೋಟೋ ಹಾಗೂ ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸರ್ಕಾರ ಎಲ್ಲಾ ಆರೋಪಿಗಳನ್ನು ಬೇರೆ ಬೇರೆ ಕಾರಾಗೃಹಗಳಿಗೆ ಶಿಫ್ಟ್ ಮಾಡಲು ಸೂಚನೆ ಕೊಟ್ಟಿತ್ತು. ಇದಕ್ಕೆ ಇಂದು ನ್ಯಾಯಾಲಯ ಕೂಡ ಅನುಮತಿ ಕೊಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

