Breaking News

ಬಸ್‌ ನಿಲ್ದಾಣದಲ್ಲಿ ಪಾರ್ಕ್ ಮಾಡಿದ ವಾಹನ ಎಸ್ಕೆಪ್

ಕುಂದಗೋಳ: ಬಸ್‌ ನಿಲ್ದಾಣ ಸಮೀಪದ ಅಂಗಡಿಯೊಂದರ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ನಡೆದಿದೆ.

ಆಗಷ್ಟ 20ರಂದು ಸಂಶಿ ಗ್ರಾಮದ ಬಸ್ ನಿಲ್ದಾಣ ಬಳಿಯ ಬಂಡಿವಾಡ ಜನರಲ್ ಸ್ಟೋರ್ ಬಳಿ ನಿಲ್ಲಿಸಿದ್ದ ಹಿರೋ ಎಚ್.ಎಫ್ ಕಂಪನಿ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ಅರುಣಕುಮಾರ ಬಾಬುಗೌಡ ಯರಡ್ಡಿ ಎಂಬುವವರೇ ದ್ವಿಚಕ್ರ ವಾಹನ ಕಳೆದುಕೊಂಡವರು.
ಈ ಪ್ರಕರಣದ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *