ಇಂಗ್ಲೆಂಡ್: ಮುಂಬರುವ ಆಸ್ಟ್ರೇಲಿಯ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಿಗೆ ಕ್ರಿಕೆಟ್ ಇಂಗ್ಲೆಂಡ್ ಕೆಲವು ದಿನಗಳ ಹಿಂದಷ್ಟೇ ತನ್ನ ತಂಡವನ್ನು ಪ್ರಕಟಿಸಿತ್ತು. ಈ ಎರಡೂ ತಂಡಗಳಲ್ಲೂ ತಂಡದ ಹಲವು ಹಿರಿಯ ಹಾಗೂ ಅನುಭವಿ ಆಟಗಾರರು ಅವಕಾಶ ವಂಚಿತರಾಗಿದ್ದರು.
ಈ ನಡುವೆ ಇಂಗ್ಲೆಂಡ್ ಕ್ರಿಕೆಟ್ ಪಾಳಯದಿಂದ ಆಘಾತಕ್ಕಾರಿ ಸುದ್ದಿ ಹೊರಬಂದಿದ್ದು, ಐಸಿಸಿ ರ್ಯಾಂಕಿಂಗ್‌ನಲ್ಲಿ ಬಹಳಷ್ಟು ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

