Breaking News

ಗಡಿಪಾರಾದ ರೌಡಿಶೀಟರ್‌ಗಳಿಗೆ ಎಚ್ಚರಿಕೆ ಕೊಟ್ಟ ಎಡಿಜಿಪಿ ಆರ್. ಹಿತೇಂದ್ರ

ಹುಬ್ಬಳ್ಳಿ : ಗಡಿಪಾರಾದ ರೌಡಿಶೀಟರ್‌ಗಳು ಅನಧಿಕೃತವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪ್ರವೇಶಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸುವ್ಯಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ರೌಡಿಗಳ ನಿಗೃಹಕ್ಕೆ ಮತ್ತು ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈಗಾಗಲೇ ಕೆಲ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿದ್ದು, ಇನ್ನೂ ಕೆಲ ರೌಡಿಶೀಟರ್‌ಗಳ ಗಡಿಪಾರಿಗೂ ಚಿಂತನೆ ನಡೆದಿದೆ. ಮಾದಕ ವಸ್ತುಗಳ ಮತ್ತು ಪೆಡ್ಲರ್‌ಗಳ ನಿಗ್ರಹಕ್ಕೆ ಇಲಾಖೆ ಬದ್ಧವಾಗಿದೆ ಎಂದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *