ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ.
ಮೃತರು ಉತ್ತರ ಪ್ರದೇಶದ ನಿವಾಸಿಗಳಾದ ಸೂರಜ್ (27) ಹಾಗೂ ಕಮಲ್ (26) ಎಂದು ತಿಳಿದು ಬಂದಿದೆ. ಗಾಯಗೊಂಡ ಜೈಸಿಂಗ್ ಹಾಗೂ ಜೈಸಿಂಗ್ ಎಂಬವರಿಗೆ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಉಳಿದಿಬ್ಬರನ್ನು ಹಿಂದುಪೂರ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಆರು ಜನರು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಹಿಂದೂಪುರ ಬಳಿಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಇನೋವಾ ಕಾರಿನಲ್ಲಿ ಗೌರಿಬಿದನೂರು ಮಾರ್ಗವಾಗಿ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪಿಎಸ್‌ಐ ರಮೇಶ್ ಗುಗ್ರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

