Breaking News

ಅಪಘಾತಗಳ ಸಂಖ್ಯೆಯಲ್ಲಿ ಬೆಳಗಾವಿ 2 ನೇ ಸ್ಥಾನ : ಎಡಿಜಿಪಿ ಅಲೋಕ್ ಕುಮಾರ್

ಬೆಳಗಾವಿ: ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿವೆ. ಆದರೂ ಬೆಳಗಾವಿ ಜಿಲ್ಲೆ ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿ ಇದೆ ಎಂದು ಟ್ರಾಫಿಕ್ ಎಡಿಜಿಪಿ ಅಲೋಕ್ ಕುಮಾರ್ ಅವರು ತಿಳಿಸಿದರು.

ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಹಾಗೂ ಬೆಳಗಾವಿ ನಗರದಲ್ಲಿ ಟ್ರಾಫಿಕ್ ಬಗ್ಗೆ ಹಿರಿಯ ಅಧಿಕಾರಿಗಳು ಹೊಸ ವಿಧಾನಗಳು ತರಲು ಪ್ರಯತ್ತಿಸುತ್ತಿದ್ದಾರೆ.

ಕಳೆದ ವರ್ಷ ನೋಡಿದರೆ ಈ ವರ್ಷ ಅಪಘಾತದಿಂದ ಸಾವನ್ನಪ್ಪುವವರ ಸಂಖ್ಯೆ 15-20% ಕಡಿಮೆ ಆಗಿದೆ. ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ನೋಡಿದರೆ ಬೆಳಗಾವಿ ಎರಡನೆಯ ಸ್ಥಾನದಲ್ಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಅಪಘಾತವಾಗುವ ರೋಡ್‌ಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ 70-80% ಬೈಕ್ ಗಳ ಮೇಲೆ ಅಪಘಾತಗಳು ಸಂಭವಿಸುತ್ತಿದೆ. ಕುಡಿದು ವಾಹನ ಚಾಲನೆ ಮಾಡುವರ ಬಗ್ಗೆ ನಿಗಾ ವಹಿಸುತ್ತೇವೆ. ಬೆಳಗಾವಿಯ ಆಟೋಗಳಲ್ಲಿ ಮೀಟ‌ರ್ ಅಳವಡಿಸಿಲ್ಲ ಇದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದರು.

Share News

About bigtvnews22

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *