ಹಾವೇರಿ : ಸಿಎಂ ಸಿದ್ದರಾಮಯ್ಯ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ನಂತರ ಹುಬ್ಬಳ್ಳಿ ಯಿಂದ ರಸ್ತೆ ಮಾರ್ಗವಾಗಿ ರಾಣೇಬೆನ್ನೂರ ತಾಲೂಕಿನ ದೇವರಗುಡ್ಡಕ್ಕೆ ಆಗಮಿಸಿ ಮಾಲತೇಶ ದೇವರ ದರ್ಶನ ಪಡೆಯಲಿದ್ದಾರೆ. ನಂತರ ದೇಶ ಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ & ಶ್ರೀ ಕನಕ ಭವನ ಉದ್ಘಾಟನೆ ಮಾಡಲಿದ್ದಾರೆ.
ಬಳಿಕ ಹಾವೇರಿಯ ಐತಿಹಾಸಿಕ ಹೆಗ್ಗೇರಿ ಕೆರೆಗೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಹಾವೇರಿಯಿಂದ ರಸ್ತೆಮಾರ್ಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತಲುಪಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ವಿವಿಧ ಸಚಿವರು ಶಾಸಕರು ಅಧಿಕಾರಿಗಳು ಸಾಥ್ ನೀಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

