ಮುಂಬೈ: ದೇಶದ ಹಿರಿಯ ಖ್ಯಾತ ವಕೀಲ, ಸಂವಿಧಾನ ತಜ್ಞ ಅಬ್ದುಲ್ ಗಫೂರ್ ಮಜೀದ್ ನೂರಾನಿ ಗುರುವಾರ ಮುಂಬೈನಲ್ಲಿನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಮುಂಬೈನಲ್ಲಿ 16, 1930 ರಂದು ಜನಿಸಿದ ನೂರಾನಿ ಅವರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ, ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಲ್ಲಿ ವಕೀಲರಾಗಿದ್ದರು.
1960ರ ದಶಕದ ಆರಂಭದಲ್ಲಿ ದೇಶ-ವಿದೇಶಗಳ ಪತ್ರಿಕೆಗಳಿಗೆ ಬರೆಯಲು ಪ್ರಾರಂಭಿಸಿದ್ದ ಅವರು ಇದುವರೆಗೂ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ವಿವಿಧ ಪತ್ರಿಕೆಗಳಿಗೆ ಅಂಕಣಗಳನ್ನು ಬರೆದಿದ್ದಾರೆ.
ಕಾಶ್ಮೀರದ ಶೇಖ್ ಅಬ್ದುಲ್ಲಾ ಅವರ ದೀರ್ಘಾವಧಿಯ ಬಂಧನದ ಪ್ರಕರಣದಲ್ಲಿ ವಾದ ಮಂಡಿಸಿದ್ದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದ ಜೆ.ಜಯಲಲಿತಾ ವಿರುದ್ಧವೂ ಅವರು ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

