Breaking News

ಕಾಡಾನೆ ದಾಳಿಗೆ ಮಹಿಳೆ ಬಲಿ

ಕೊಡಗು: ಮಲೆನಾಡಿನ ಕೊಡಗಿನಲ್ಲಿ ಆನೆ- ಮಾನವ ಸಂಘರ್ಷ ಮುಂದುವರಿದಿದೆ. ಬೆಳ್ಳಂಬೆಳ್ಳಗೆ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ.

ಮನೆಯ ಸಮೀಪವೇ ಮಹಿಳೆ ಮೇಲೆ ದಾಳಿ ನಡೆಸಿ ಕಾಡಾನೆ ಕೊಂದು ಹಾಕಿದೆ. ಚನ್ನಯ್ಯನಕೋಟೆ ನಿವಾಸಿ ಕಾತಯಿ (72) ಮೃತ ದುರ್ದೈವಿ. ಮಗನ ಮನೆಯಿಂದ ಹೊರ ಬರುತ್ತಿದ್ದ ವೇಳೆ ರೊಚ್ಚಿಗೆದ್ದ ಕಾಡಾನೆಯೂ ದಾಳಿ ಮಾಡಿದೆ. ವೃದ್ದೆಯಾಗಿರುವುದರಿಂದ ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ నిee ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *