Breaking News

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ.

25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಧವಾರ ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ 25 ಜನರು ವಾತಿ-ಭೇದಿ ಬಳಲಿದರು. ಜೋಳದಾಳ ಗ್ರಾಮಕ್ಕೆ ಚನ್ನಗಿರಿ ಇಒ ಬಿ.ಕೆ.ಉತ್ತಮ್, ಕುಡಿಯುವ ನೀರು ವಿಭಾಗದ ಎಇಇ ಲೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೋಳದಾಳ ಗ್ರಾಮದಲ್ಲಿ ವೈದ್ಯರ ತಂಡ ಠಿಕಾಣಿ ಹೂಡಿದೆ. ಕಾಯಿಸಿ ಆರಿಸಿದ ನೀರು ಕುಡಿಯುವಂತೆ ಗ್ರಾಮಸ್ಥರಿಗೆ ವೈದ್ಯರು ಸೂಚಿಸಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *