ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಮಹಿಳಾ ಅಧಿಕಾರಿ ಕೋಣೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸದ್ಯ ಈ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದ್ದು ರೈಲ್ವೇ ಪೊಲೀಸ್ ಠಾಣೆ ಅಧಿಕಾರಿಗಳು ಕೃತ್ಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣ 2023 ರ ಅಕ್ಟೋಬರ್‌ನಲ್ಲಿ ಜಬಲ್‌ಪುರದ ಕಟ್ಟಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಹಿನ್ನಲೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

