Breaking News

ಮದುವೆಯಾಗುವ ಭರವಸೆ ನೀಡಿ ನರ್ಸ್ ಮೇಲೆ ನಿರಂತರ ಅತ್ಯಾಚಾರ

ಉತ್ತರ ಪ್ರದೇಶ: ಮದುವೆಯಾಗುವ ಭರವಸೆ ನೀಡಿ ನರ್ಸ್ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಭದೋಹಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಚಿಂತಾಮಣಿ ಶರ್ಮಾ ಎಂದು ಗುರುತಿಸಲಾಗಿದೆ. 36 ವರ್ಷದ ನರ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆಎಂ ಸಬಿಹಾ ಖಾತೂನ್, ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು. ಅದರಂತೆ ಆರೋಪಿ ಚಿಂತಾಮಣಿ ಶರ್ಮಾ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಜತೆಗೆ ವಾರಾಣಸಿಯಲ್ಲಿ ಅತನನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯು ಅಪಾರ್ಟೆಂಟ್‌ನಲ್ಲಿ ವಾಸಿಸುತ್ತಿದ್ದನು. ಸಂತ್ರಸ್ತೆ 15 ವರ್ಷದ ವಿದ್ಯಾರ್ಥಿನಿಯಾಗಿದ್ದಾಗ ಆಕೆಯೊಂದಿಗೆ ಸ್ನೇಹ ಬೆಳಸಿದ್ದನು. ಜತೆಗೆ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದನು. ಆರೋಪಿ ಬೆದರಿಕೆ ಹಾಕುವ ಮೂಲಕ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಭಾದೋಹಿ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಹೇಳಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *