Breaking News
Transparent umbrella under heavy rain against water drops splash background. Rainy weather concept.

ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *