Breaking News

ನಾಯಿ ದಾಳಿ: ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ರೇಬಿಸ್​ಗೆ ಬಲಿ

ಬೆಂಗಳೂರು : ಕರ್ನಾಟಕದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಈ ವರ್ಷ ನಾಯಿ ದಾಳಿಯಿಂದಾಗಿ ರೇಬಿಸ್ ಕಾಯಿಲೆಗೆ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಪ್ರತಿ ವರ್ಷ ರೇಬೀಸ್ ರೋಗಕ್ಕೆ 25ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.ಈ ವರ್ಷ ಈಗಾಗಲೇ ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 2022ರಲ್ಲಿ 32 ಜನರು ರೇಬಿಸ್​ ರೋಗಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರೇಬಿಸ್​ ಪ್ರಕರಣಗಳು ಕೊಂಚ ಏರಿಕೆಯಾಗಿದೆ.
ಮನುಷ್ಯರಿಗೆ ರೇಬಿಸ್ ರೋಗವು ಶೇ.99ರಷ್ಟು ನಾಯಿ ಕಡಿತದಿಂದ ಬರುತ್ತದೆ, ಇನ್ನುಳಿದಂತೆ ಬೆಕ್ಕು ತೋಳ ನಾಯಿ ಕಾಡು ಪ್ರಾಣಿಗಳ ಕಡಿತದಿಂದ ಶೇ.1 ಪ್ರಮಾಣದಷ್ಟು ಹರಡುತ್ತದೆ. ರೇಬೀಸ್ ತಡೆಗೆ ನಾಯಿ ಕಚ್ಚಿದ ನಂತರ ಗಾಯವನ್ನು ಸ್ವಚ್ಚ ನೀರಿನಲ್ಲಿ 15 ನಿಮಿಷಗಳ ಕಾಲ ತೊಳೆಯುವುದರಿಂದ ಶೇ.50 ರಿಂದ 70 ರಷ್ಟು ರೇಬಿಸ್‍ಗೆ ತುತ್ತಾಗುವುದನ್ನು ತಡೆಯಬಹುದು. ವೈದ್ಯರ ಸಲಹೆ ಮೇರೆಗೆ 1ನೇ ದಿವಸ, 3ನೇ ದಿವಸ, 7ನೇ ದಿವಸ, 14ನೇ ದಿವಸ, 28ನೇ ದಿವಸ ಸಂಪೂರ್ಣವಾಗಿ 5 ಡೋಸ್‍ಗಳನ್ನು ಪಡೆಯುವುದರ ಮೂಲಕ ರೇಬಿಸ್ ತಡೆಗಟ್ಟಬಹುದಾಗಿದೆ.ರೇಬಿಸ್ ಖಾಯಿಲೆಗೆ ಒಮ್ಮೆ ತುತ್ತಾದ ಬಳಿಕ ಯಾವುದೇ ಚಿಕಿತ್ಸೆ ಇರುವುದಿಲ್ಲವಾದರೂ ರೇಬಿಸ್ ಖಾಯಿಲೆಯು ಸೂಕ್ತ ಪೂರ್ವ ರೋಗ ನಿರೋಧಕ ಲಸಿಕೆ ಪಡೆಯುವುದರಿಂದ ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಪ್ರಾಣಿ ಕಡಿತ ಸಂದರ್ಭದಲ್ಲಿ ಗಾಬರಿಪಡದೆ ನಾಯಿ, ಪ್ರಾಣಿ ಕಡಿತದ 24 ಗಂಟೆಯೊಳಗೆ ಆಯಂಟಿ ರೇಬಿಸ್ ಲಸಿಕೆಯನ್ನು ತಪ್ಪದೇ ಪಡೆಯಬೇಕಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *