Breaking News

ರಾಜ್ಯಾದ್ಯಂತ ಪೋಡಿ ದುರಸ್ತಿ ಅಭಿಯಾನ ಆರಂಭ:ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ರಾಜ್ಯಾದ್ಯಂತ ಸೆಪ್ಟೆಂಬರ್ 2 ರ ನಾಳೆಯಿಂದ ಪೋಡಿ ದುರಸ್ತಿ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸೂಚಿಸಿದರು.
ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೆಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ ಎಂದು ಮಾಹಿತಿ ನೀಡಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *