ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಯೋಜನೆಯಿಂದ 7 ಜಿಲ್ಲೆಗಳಿಗೆ ಕುಡಿಯುವ ನೀರು ಸಿಗಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿದ್ದಾರೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದು ಯಶಸ್ವಿಯಾಗಿದೆ ಎಂದು ತಿಳಿಸಿದರು.
ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್ ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

