ಹುಬ್ಬಳ್ಳಿ : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ನನಗೂ ಸಿಎಂ ಆಗಬೇಕೆಂಬ ಆಸೆ ಇರಲ್ವಾ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಬೇಕು ಅನ್ನುವ ಆಸೆ ಯಾರಿಗೆ ಇರಲ್ಲ ಹೇಳಿ ನನಗೂ ಸಿಎಂ ಆಗಬೇಕು ಅಂತ ಆಸೆ ಇರಲ್ವಾ ಎಲ್ಲರಿಗೂ ಆಸೆ ಇರುತ್ತೆ ಅದು ತಪ್ಪಲ್ಲ. ಸದ್ಯ ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

