ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ವೇಗವಾಗಿ ಬಂದಂತಹ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪರಶುರಾಮ (40) ಹನುಮಂತ (35) ಮೃತ ದುರ್ದೈವಿಗಳು. ಮೃತರು ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

