Breaking News

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಜೂ.ಎನ್ ಟಿ ಆರ್

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನಕ್ಕೆ ನಟ ಜೂ.ಎನ್‌ಟಿಆರ್ ಹಾಗೂ ಕುಟುಂಬ ಆಗಮಿಸಿದೆ. ಮಧ್ಯಾಹ್ನ ಮಹಾಪೂಜೆ ಸಂದರ್ಭಗಳಲ್ಲಿ ದೇವಸ್ಥಾನಕ್ಕೆ ಆಗಮಿಸಿ ತಾಯಿ ಕೊಲ್ಲೂರಮ್ಮನ ದರ್ಶನ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು ದೇಗುಲದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕೆಜಿಎಫ್ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ನೀಲ್ ಕುಟುಂಬವೂ ಜೊತೆಯಾಯಿತು. ಲಾಫಿಂಗ್ ಬುದ್ಧ ನಟ ಪ್ರಮೋದ್ ಶೆಟ್ಟಿ ಸಹ ಜೊತೆಗೆ ಬಂದು ದೇವರ ದರ್ಶನ ಮಾಡಿದರು. ನಾಲ್ಕು ಕುಟುಂಬಗಳು ಕೊಲ್ಲೂರಿನಲ್ಲಿ ಜೊತೆಯಾಗಿ ಬಂದು ದರ್ಶನ ಪಡೆದು ಪ್ರಸಾದ ಸ್ವೀಕಾರ ಮಾಡಿದರು.
ನಾಲ್ಕು ದಶಕದ ನಂತರ ಜೂ.ಎನ್‌ಟಿಆರ್ ತಾಯಿ ಶಾಲಿನಿ ನಂದಮೂರಿ ಕರಾವಳಿಗೆ ಬಂದಿದ್ದಾರೆ. ಪತ್ನಿ ಲಕ್ಷ್ಮಿ ಪ್ರಣತಿ, ಪ್ರಗತಿ ರಿಷಬ್, ಪ್ರಶಾಂತ್ ನೀಲ್, ಲಿಖಿತಾ ನೀಲ್ ಮೂಕಾಂಬಿಕೆಯ ದರ್ಶನ ಮಾಡಿ ಪ್ರಾಂಗಣದಲ್ಲಿರುವ ಗುಡಿಗಳಿಗೆ ಭೇಟಿ ಕೊಟ್ಟು ಪ್ರಸಾದ ಸ್ವೀಕರಿಸಿದರು. ಕೊಲ್ಲೂರು ಆಡಳಿತದಿಂದ ನಟರಿಗೆ ಗೌರವ ಸಮರ್ಪಣೆ ಮಾಡಲಾಯಿತು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *