Breaking News

ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ: ಕೃಷ್ಣಬೈರೇಗೌಡ

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್2 ರ ಇಂದಿನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್‌ ಬೀಟ್ ಮೂಲಕ ತಿಳಿದುಬಂದಿದೆ. ರಾಜ್ಯದಲ್ಲಿ ಈವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿರುವುದನ್ನು ಪತ್ತೆಹಚ್ಚಲಾಗಿದ್ದು, ನಾಳೆಯಿಂದ ರಾಜ್ಯಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು ಸಜ್ಜಾಗಿದೆ.
ರಾಜ್ಯಾದ್ಯಂತ ಒಟ್ಟು 239 ತಹಸೀಲ್ದಾರ್ ಗಳಿದ್ದು, ಪ್ರತಿಯೊಬ್ಬರು ತಮ್ಮ ವ್ಯಾಪ್ತಿಯಲ್ಲಿ ತಿಂಗಳಿಗೆ 10 ರಿಂದ 20 ಒತ್ತುವರಿ ಪ್ರಕರಣಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ವಾರಾಂತ್ಯದಲ್ಲಿ ಪ್ರಗತಿ ಪರಿಶೀಲಿಸಿ ವಿವರಗಳನ್ನು ಕಂದಾಯ ಆಯುಕ್ತಾಲಯಕ್ಕೆ ಸಲ್ಲಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *